Lakshmi Hebbalkar: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದ ಸಭೆಗೆ ಪಾಲ್ಗೊಳ್ಳಲು ಬಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆತ್ಮವಿಶ್ವಾಸದಿಂದ ಬೀಗುತ್ತಿದ್ದರು!

ಅರುಣ್​ ಕುಮಾರ್​ ಬೆಳ್ಳಿ

Updated on: Jun 08, 2023 | 2:50 PM

ಒಂದೇ ಮನೆಯಲ್ಲಿ ಅತ್ತೆ ಸೊಸೆ ವಾಸವಾಗಿದ್ದರೆ, ಫಲಾನುಭವಿ ಯಾರಾಗುತ್ತಾರೆ ಅನ್ನೋದು ಮಿಲಿಯನ್ ಡಾಲರ್ ಪ್ರಶ್ನೆಯಾಗಿ ಉದ್ಭವಿಸಿದೆ.

ಬೆಂಗಳೂರು: ಸಚಿವರಾದ ಬಳಿಕ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರ ಗತ್ತು ಬದಲಾಗಿದ್ದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಅವರ ನಡಿಗೆಯಲ್ಲಿ ಆತ್ಮವಿಶ್ವಾಸ ಎದ್ದುಕಾಣುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ಕರೆದಿರುವ ಸಭೆಯಲ್ಲಿ ಪಾಲ್ಗೊಳ್ಳಲು ಮಹಿಳೆ ಮತ್ತು ಮಕ್ಕಳ ಕಲ್ಯಾಣ ಖಾತೆ (Women and Child Welfare) ಸಚಿವೆ ತಮ್ಮ ಕಾರಲ್ಲಿ ವಿಧಾನಸೌಧಕ್ಕೆ ಆಗಮಿಸಿದರು. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಎದ್ದಿರುವ ಗೊಂದಲಗಳನ್ನು ನಿವಾರಿಸಲು ಮುಖ್ಯಮಂತ್ರಿ ಸಭೆ ಕರೆದಿದ್ದಾರೆ. ಈ ಯೋಜನೆ ಹೆಬ್ಬಾಳ್ಕರ್ ನಿರ್ವಹಿಸುತ್ತಿರುವ ಖಾತೆಯ ವ್ಯಾಪ್ತಿಗೆ ಬರೋದ್ರಿಂದ ಸಭೆಯಲ್ಲಿ ಅವರ ಉಪಸ್ಥಿತಿ ಅತ್ಯಾವಶ್ಯಕವಾಗಿದೆ. ಒಂದೇ ಮನೆಯಲ್ಲಿ ಅತ್ತೆ ಸೊಸೆ ವಾಸವಾಗಿದ್ದರೆ, ಫಲಾನುಭವಿ ಯಾರಾಗುತ್ತಾರೆ ಅನ್ನೋದು ಮಿಲಿಯನ್ ಡಾಲರ್ ಪ್ರಶ್ನೆಯಾಗಿ ಉದ್ಭವಿಸಿದೆ. ಹಲವಾರು ಮನೆಗಳಲ್ಲಿ ಜಗಳಗಳು ಶುರುವಾಗಿರುವ ವದಂತಿಗಳೂ ಇವೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.