ಅಯ್ಯೋ ನಮ್ಮ ಸಿಎಂ ತುಂಬಾ ಬ್ಯೂಸಿ, ನನ್ನ ಫೋನ್ಗೂ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್
ಮಾಜಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮುಖ್ಯಮಂತ್ರಿಗಳ 18 ಗಂಟೆಗಳ ಕಾರ್ಯವೈಖೆಯನ್ನು ಸಮರ್ಥಿಸಿಕೊಂಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯಲ್ಲಿನ ವಿಳಂಬಕ್ಕೆ ಮುಖ್ಯಮಂತ್ರಿಗಳ ಬಿಡುವಿಲ್ಲದ ಕೆಲಸ ಕಾರಣ ಎಂದು ತಿಳಿಸಿದ್ದಾರೆ. ಇದಲ್ಲದೆ, ಬೆಳಗಾವಿ ಗ್ರಾಮೀಣ ಪ್ರದೇಶದಲ್ಲಿನ ಕುಡಿಯುವ ನೀರಿನ ಯೋಜನೆಯ ಪ್ರಗತಿ ಮತ್ತು ರೈತರ ಸಹಕಾರದ ಅಗತ್ಯತೆಯ ಬಗ್ಗೆಯೂ ಅವರು ಮಾತನಾಡಿದ್ದಾರೆ.
ಬೆಳಗಾವಿ, ಅ.6: ಮುಖ್ಯಮಂತ್ರಿಗಳು ದಿನಕ್ಕೆ ಸುಮಾರು 18 ಗಂಟೆಗಳ ಕಾಲ ಕೆಲಸ ಮಾಡುವುದರಿಂದ ಫೋನ್ಗೆ ಸಿಗುವುದು ಕಷ್ಟ ಎಂದು ಮಾಜಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಹಣ ಬಿಡುಗಡೆಯಲ್ಲಿ ವಿಳಂಬವಾಗುತ್ತಿದೆ ಎಂಬ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಗಳ ಬಿಡುವಿಲ್ಲದ ಕಾರ್ಯವೈಖೆಯೇ ಇದಕ್ಕೆ ಕಾರಣ ಎಂದು ತಿಳಿಸಿದ್ದಾರೆ. ಯೋಜನೆಯ ಹಣ ಬಿಡುಗಡೆ ಕುರಿತು ಹಣಕಾಸು ಇಲಾಖೆಯ ಕಾರ್ಯದರ್ಶಿ ರಿತೇಶ್ ಅವರಿಗೆ ಹಲವು ಬಾರಿ ಕರೆ ಮಾಡಿ, ಕಾಳಜಿ ವಹಿಸಿ ತಾವು ಹಿಂದೆ ಕೆಲಸ ಮಾಡಿದ್ದು, ಈಗಲೂ ತಮ್ಮ ಇಲಾಖೆಯ ಕಾರ್ಯದರ್ಶಿಗಳು ಅದೇ ರೀತಿ ಮುಂದುವರಿದಿದ್ದಾರೆ ಎಂದರು. ಈ ಕಾರಣದಿಂದಾಗಿ ಯೋಜನೆಗಳ ದಿನಾಂಕಗಳಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳು ಆಗಬಹುದು ಎಂದು ಅವರು ಸ್ಪಷ್ಟಪಡಿಸಿದರು. ಅಲ್ಲದೆ, ಕುಡಿಯುವ ನೀರಿನ ಯೋಜನೆಯ ಕುರಿತು ಮಾತನಾಡಿ, ಸುಮಾರು ಹನ್ನೆರಡು ಊರುಗಳಿಗೆ ಫಿಲ್ಟರ್ ನೀರು ತಲುಪಿಸುವ ಯೋಜನೆ ಇದೆ. ರೈತರು ರಿಸರ್ವ್ ವಾಯರ್ ನಿರ್ಮಾಣಕ್ಕೆ ಸಹಕಾರ ನೀಡದಿದ್ದರೆ, ನೇರವಾಗಿ ಹೊಳೆಯಿಂದ ನೀರನ್ನು ಬಿಡುವ ಮೂಲಕ ಯೋಜನೆಯನ್ನು 100% ಪೂರ್ಣಗೊಳಿಸಲಾಗುವುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Oct 06, 2026 05:00 PM
ಹಾಸನದಲ್ಲೊಂದು ಅಪರೂಪದ ಘಟನೆ: ಎರಡು ಕಾಡಾನೆಗಳ ಜಗಳ ಬಿಡಿಸಿದ ಶ್ವಾನ
ಧನ್ವೀರ್ ಗೌಡ ಮನೆಗೆ ಮುತ್ತಿಗೆ ಹಾಕುತ್ತೇವೆ’: ಝೈದ್ ಖಾನ್ ಫ್ಯಾನ್ಸ್ ಗರಂ
ಪಿ.ಎಸ್.ಲೇನ್ ರಸ್ತೆಯಲ್ಲಿ ಏಕಾಏಕಿ ಕುಸಿದ ಕಾಂಪೌಂಡ್: ಬೈಕ್ಗಳು ಜಖಂ
ಶೂನಲ್ಲಿ ಹೈಡ್ರೋಪೋನಿಕ್ ಗಾಂಜಾ ಇಟ್ಟುಕೊಂಡು ಬಂದು ಬೆಂಗಳೂರಿನಲ್ಲಿ ಲಾಕ್

