Lakshmi Hebbalkar: ಬೆಳಗಾವಿಯ ನಿವಾಸದಲ್ಲಿ ಕೇದಾರ ಪೀಠದ ಜಗದ್ಗುರುಗಳ ಪಾದಪೂಜೆ ಮಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

ಈ ವೇಳೆ ಮಾತನಾಡಿದ ಕೇದಾರ ಪೀಠದ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ, ಕೇದಾರದಿಂದ ಕರ್ನಾಟಕದ ಬೆಳಗಾವಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆಗೆ ಬಂದಿದ್ದೇವೆ. ಕೇದಾರನಾಥ ನನ್ನನ್ನು ಕಳಿಸಿಕೊಟ್ಟಿದ್ದಕ್ಕೆ ನಾನಿಲ್ಲಿಗೆ ಬಂದಿದ್ದೇನೆ ಎಂದಿದ್ದಾರೆ.

TV9kannada Web Team

| Edited By: Sushma Chakre

Jul 06, 2022 | 5:02 PM

ಬೆಳಗಾವಿಯ ತಮ್ಮ ನಿವಾಸದಲ್ಲಿ ಕೇದಾರ ಪೀಠದ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪಾದಪೂಜೆ ನೆರವೇರಿಸಿದ್ದಾರೆ. ಈ ವೇಳೆ ಮಾತನಾಡಿದ ಕೇದಾರ ಪೀಠದ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ, ಕೇದಾರದಿಂದ ಕರ್ನಾಟಕದ ಬೆಳಗಾವಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆಗೆ ಬಂದಿದ್ದೇವೆ. ಕೇದಾರನಾಥ ನನ್ನನ್ನು ಕಳಿಸಿಕೊಟ್ಟಿದ್ದಕ್ಕೆ ನಾನಿಲ್ಲಿಗೆ ಬಂದಿದ್ದೇನೆ. ನಾಲ್ಕು ತಿಂಗಳ ಕಾಲ ನಾವು ಕೇದಾರನಾಥದಲ್ಲೇ ಇರಬೇಕಾಗುತ್ತದೆ. ನಂತರ ಆರು ತಿಂಗಳು ನಿಯೋಜಿತ ಕಾರ್ಯಕ್ರಮಗಳಾಗುತ್ತವೆ ಎಂದು ತಿಳಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಭಕ್ತಿಯಿಂದ ತಮ್ಮನ್ನು ತಾವು ಅರ್ಪಣೆ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

 

Follow us on

Click on your DTH Provider to Add TV9 Kannada