ಸಿದ್ದರಾಮಯ್ಯ ಸರ್ಕಾರ ಲಿಂಗಾಯತ ವಿರೋಧಿ ಅಂತ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್

Updated on: Apr 27, 2024 | 12:35 PM

ಇದನ್ನು ತಾನು ಕೇವಲ ಆರೋಪ ಮಾಡಲು ಹೇಳುತ್ತಿಲ್ಲ, ಕಿತ್ತೂರು ರಾಣಿ ಚೆನ್ನಮ್ಮನ ಪ್ರತಿಮೆ ಮುಂದೆ ನಿಂತು ಬೇಕಾದರೂ ತಾನು ಲಕ್ಷ್ಮಿ ಹೆಬ್ಬಾಳ್ಕರ್ ಹಾಗೆ ಹೇಳಿದ್ದಾರೆಂದು ಪ್ರಮಾಣ ಮಾಡುವುದಾಗಿ ಹೇಳಿದ ಯತ್ನಾಳ್, ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಸಚಿವರಾಗಿರುವ ಲಿಂಗಾಯತ ನಾಯಕರಿಗೆ ಮುಖ್ಯಮಂತ್ರಿ ಮುಂದೆ ನಿಂತು ಮಾತಾಡುವ ಧೈರ್ಯವಿಲ್ಲ ಎಂದರು.

ಧಾರವಾಡ: ಜಿಲ್ಲೆಯ ಮೊರಬ ಗ್ರಾಮದಲ್ಲಿ ನಿನ್ನೆ ಸಾಯಂಕಾಲ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ (Pralhad Joshi) ಪರ ಪ್ರಚಾರ ಮಾಡಿದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ವಿರುದ್ಧ ಗಂಭೀರವಾದ ಅರೋಪ ಮಾಡಿದರು. ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಸಚಿವೆ ಹೆಬ್ಬಾಳ್ಕರ್ ಅವರನ್ನು ತಾನು ಮೀಸಲಾತಿ ಬಗ್ಗೆ ಕೇಳಿದಾಗ ಅವರು ತಮ್ಮ ಸರ್ಕಾರ ಮೀಸಲಾತಿ ನೀಡಲ್ಲ, ಯಾಕೆಂದರೆ ಕಾಂಗ್ರೆಸ್ ಪಕ್ಷ ಲಿಂಗಾಯತ ವಿರೋಧಿ ಪಕ್ಷವಾಗಿದೆ, ಲಿಂಗಾಯತರೆಂದರೆ ಸರ್ಕಾರಕ್ಕೆ ಅಲರ್ಜಿ ಎಂದಿದ್ದರು ಅಂತ ಯತ್ನಾಳ್ ಹೇಳಿದರು. ಇದನ್ನು ತಾನು ಕೇವಲ ಆರೋಪ ಮಾಡಲು ಹೇಳುತ್ತಿಲ್ಲ, ಕಿತ್ತೂರು ರಾಣಿ ಚೆನ್ನಮ್ಮನ ಪ್ರತಿಮೆ ಮುಂದೆ ನಿಂತು ಬೇಕಾದರೂ ತಾನು  ಲಕ್ಷ್ಮಿ ಹೆಬ್ಬಾಳ್ಕರ್ ಹಾಗೆ ಹೇಳಿದ್ದಾರೆಂದು ಪ್ರಮಾಣ ಮಾಡುವುದಾಗಿ ಯತ್ನಾಳ್ ಹೇಳಿದರು. ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಸಚಿವರಾಗಿರುವ ಲಿಂಗಾಯತ ನಾಯಕರಿಗೆ ಮುಖ್ಯಮಂತ್ರಿ ಮುಂದೆ ನಿಂತು ಮಾತಾಡುವ ಧೈರ್ಯವಿಲ್ಲ, ತಮಗೆ ಅವರು ಅಪಾಯಿಂಟ್ ಮೆಂಟನ್ನೇ ಕೊಡಲ್ಲ ಎಂದು ಹೇಳಿದ್ದಾರೆ ಎಂದು ಯತ್ನಾಳ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಕಾಂಗ್ರೆಸ್​ ಸರ್ಕಾರದಲ್ಲಿ ಶೆ.50ರಷ್ಟು ಕಮಿಷನ್​: ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More