Lakshmi Hebbalkar: ರಾಜಭವನದ ಆವರಣದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಕುಟುಂಬದ ಸದಸ್ಯರು, ಎಲ್ಲರೂ ಆನಂದತುಂದಿಲ!
ಶಾಸಕಿಯ ದೊಡ್ಡಮ್ಮ, ಚಿಕ್ಕಮ್ಮ, ಅಕ್ಕ, ತಮ್ಮ, ಮಗಳು ಮೊದಲಾದವರು ಲಕ್ಷ್ಮಿ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದೆ ಅಂತ ಸಂತಸ ಮತ್ತು ಹೆಮ್ಮೆ ವ್ಯಕ್ತಪಡಿಸುತ್ತಿದ್ದಾರೆ.
ಬೆಂಗಳೂರು: ಬೆಳಗಾವಿ ಗ್ರಾಮೀಣ ಶಾಸಕರಾಗಿ ವಿಧಾನಸಭೆಗೆ ಆಯ್ಕೆಯಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ಇಂದು ಎರಡೂವರೆ ದಶಕಗಳ ತಮ್ಮ ರಾಜಕೀಯ ಬದುಕಿನಲ್ಲಿ ಮೊದಲ ಬಾರಿ ಸಚಿವೆಯಾಗಿ (minister) ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರ ಕುಟುಂಬದ ಸದಸ್ಯರು ಸಹಜಾವಾಗೇ ಸಂತೋಷದ ಅಲೆಯಲ್ಲಿ ತೇಲುತ್ತಿದ್ದಾರೆ. ಬಹಳಷ್ಟು ಜನ ಲಕ್ಷ್ಮಿ ಪ್ರಮಾಣ ವಚನ ಸ್ವೀಕರಿಸುವುದನ್ನು (oath taking) ನೋಡಲು ರಾಜಭವನಕ್ಕೆ ಆಗಮಿಸಿದ್ದಾರೆ. ಟಿವಿ9 ಕನ್ನಡ ವಾಹಿನಿಯ ಬೆಂಗಳೂರು ವರದಿಗಾರ; ಶಾಸಕಿಯ ದೊಡ್ಡಮ್ಮ, ಚಿಕ್ಕಮ್ಮ, ಅಕ್ಕ, ತಮ್ಮ, ಮಗಳು ಮೊದಲಾದವರೊಂದಿಗೆ ಮಾತಾಡಿದ್ದಾರೆ. ಲಕ್ಷ್ಮಿ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದೆ ಎಂದು ಎಲ್ಲರೂ ಸಂತಸ ಮತ್ತು ಹೆಮ್ಮೆ ವ್ಯಕ್ತಪಡಿಸುತ್ತಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ