ಗೃಹಲಕ್ಷ್ಮಿ ಯೋಜನೆ ಪ್ರತಿ ಫಲಾನುಭವಿಗೆ ದೀಪಾವಳಿ ಹಬ್ಬದೊಳಗೆ ಹಣ ವರ್ಗಾವಣೆಯಾಗಲಿದೆ: ಲಕ್ಷ್ಮಿ ಹೆಬ್ಬಾಳ್ಕರ್, ಸಚಿವೆ
ಪ್ರತಿಯೊಬ್ಬ ಅರ್ಹ ಮಹಿಳೆಗೆ ಹಬ್ಬದೊಳಗೆ ಹಣ ತಲುಪಲೇಬೇಕು ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಾಕೀತು ಮಾಡಿರುವುದರಿಂದ ತಮ್ಮ ಮೇಲೆ ದೊಡ್ಡ ಜವಾಬ್ದಾರಿ ಇದೆಯೆಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ (Gruhalakshmi Scheme) ಫಲಾನುಭವಿಗಳಿಗೆ ಹಣ ಸಂದಾಯವಾಗುತ್ತಿಲ್ಲ ಎಂಬ ದೂರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಭಾಳ್ಕರ್ (Lakshmi Hebbalkar) ಸಮಜಾಯಿಷಿ ನೀಡಿದರು. ಈ ತಿಂಗಳು ಅಂದರೆ ನವೆಂಬರ್ ನಲ್ಲಿ ಈಗಾಗಲೇ 1.16 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ ಎಂದು ಹೇಳಿದ ಸಚಿವೆ ಸುಮಾರು 8 ಲಕ್ಷ ಫಲಾನುಭವಿಗಳಿಗೆ ತಾಂತ್ರಿಕ ತೊಂದರೆಯಿಂದಾಗಿ ಹಣ ಜಮೆಯಾಗುತ್ತಿಲ್ಲ ಎಂದು ಹೇಳಿದರು. ಈ ಗರ್ವನನ್ಸ್ ನಲ್ಲಿ ಎದುರಾಗಿರುವ ಸಮಸ್ಯೆ, ಆಧಾರ್ ಲಿಂಕ್ ಮಾಡದಿರುವುದು, ಕೆಲವರಿಗೆ ಬ್ಯಾಂಕ್ ಖಾತೆಗಳಿಲ್ಲದಿರುವುದು ಮೊದಲಾದ ಅಡಚಣೆಗಳು ಎದುರಾಗುತ್ತಿವೆ ಎಂದು ಅವರು ಹೇಳಿದರು. ಮಕ್ಕಳ ಕಲ್ಯಾಣ ಅಧಿಕಾರಿಗಳಿಗೆ ತರಬೇತಿಯ ಅವಶ್ಯಕೆಯಿರುವುದರಿಂದ ವ್ಯವಸ್ಥೆ ಮಾಡಲಾಗುವುದು ಅಂತ ಹೇಳಿದ ಲಕ್ಷ್ಮಿ ಹೆಬ್ಬಾಳ್ಕರ್ ದೀಪಾವಳಿ ಹಬ್ಬದೊಳಗೆ ಗೃಹಲಕ್ಷ್ಮಿಯೋಜನೆಯಡಿ ನೋಂದಣಿಯಾಗಿರುವ ಎಲ್ಲ ಮಹಿಳೆಯರಿಗೆ ಹಣ ಸಿಗುವಂತಾಗುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದರು. ಪ್ರತಿಯೊಬ್ಬ ಅರ್ಹ ಮಹಿಳೆಗೆ ಹಬ್ಬದೊಳಗೆ ಹಣ ತಲುಪಲೇಬೇಕು ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಾಕೀತು ಮಾಡಿರುವುದರಿಂದ ತಮ್ಮ ಮೇಲೆ ದೊಡ್ಡ ಜವಾಬ್ದಾರಿ ಇದೆಯೆಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ