Application specimen: ಗುರುವಾರ ಬಿಡುಗಡೆ ಮಾಡಿದ ಅರ್ಜಿ ನಮೂನೆಯೇ ಅಸಲಿಯಾದರೂ ಕೆಲ ಬದಲಾವಣೆಗಳನ್ನು ಮಾಡಬೇಕಿದೆ: ಲಕ್ಷ್ಮಿ ಹೆಬ್ಬಾಳ್ಕರ್

ಅರುಣ್​ ಕುಮಾರ್​ ಬೆಳ್ಳಿ

Updated on: Jun 09, 2023 | 1:46 PM

ಜಾತಿ ಕಾಲಂ ಅನ್ನು ವರ್ಗ ಅಂತ ಬದಲಾಯಿಸಲಾಗುವುದು ಮತ್ತು ವಿಳಾಸದ ಕಾಲಂ ಚಿಕ್ಕದಾಗಿರುವುದರಿಂದ ವಿಸ್ತರಿಸಲಾಗುವುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme) ಸಂಬಂಧಿಸಿದ ಗೊಂದಲಗಳು ಮುಗಿಯಲಾರವು. ಅರ್ಹ ಮಹಿಳೆಯರು ಯೋಜನೆಯಡಿ ಹೆಸರು ನೋಂದಾಯಿಸಿಕೊಳ್ಳಲು ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ (Women and Child Development) ಗುರುವಾರ ಒಂದು ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿತ್ತು. ಅದರಲ್ಲೂ ಕೆಲ ಸಮಸ್ಯೆಗಳು ತಲೆದೋರಿದ್ದು ಅವುಗಳನ್ನು ಸರಿಪಡಿಸುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದರು. ವಿಧಾನ ಸೌಧದಲ್ಲಿರುವ ತಮ್ಮ ಕಚೇರಿ ಸುದ್ದಿಗಾರರನ್ನು ಉದ್ದೇಶಿಸಿ ಮಾತಾಡಿದ ಸಚಿವೆ, ಅರ್ಜಿ ನಮೂನೆಯೇನೂ ಬದಲಾಗದು, ನಿನ್ನೆ ಬಿಡುಗಡೆ ಮಾಡಿದ ಅರ್ಜಿಯೇ ಅಸಲಿ, ಆದರೆ ಅದರಲ್ಲಿ ಕೆಲ ತಿದ್ದುಪಾಟುಗಳನ್ನು ಮಾಡಲಾಗುವುದು ಎಂದು ಹೇಳಿದರು. ಜಾತಿ ಕಾಲಂ ಅನ್ನು ವರ್ಗ ಅಂತ ಬದಲಾಯಿಸಲಾಗುವುದು ಮತ್ತು ವಿಳಾಸದ ಕಾಲಂ ಚಿಕ್ಕದಾಗಿರುವುದರಿಂದ ವಿಸ್ತರಿಸಲಾಗುವುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.