ಬಜರಂಗಬಲಿ ಕೀ ಜೈ ಎಂದು ಬೆಳಗಾವಿಯಲ್ಲಿ ಘೋಷಣೆ ಕೂಗಿದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್! ವಿಡಿಯೋ ವೈರಲ್

ಬಜರಂಗಬಲಿ ಕೀ ಜೈ ಎಂದು ಬೆಳಗಾವಿಯಲ್ಲಿ ಘೋಷಣೆ ಕೂಗಿದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್! ವಿಡಿಯೋ ವೈರಲ್

ಆಯೇಷಾ ಬಾನು
|

Updated on: May 06, 2023 | 1:45 PM

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಜೈ ಭಜರಂಗ ಬಲಿ, ಪವನಪುತ್ರ ಹನುಮಾನ್ ಕೀ ಜೈ‌ ಎಂದು ಘೋಷಣೆ ಕೂಗಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬೆಳಗಾವಿ: ಭಜರಂಗದಳ ಕಾರ್ಯಕರ್ತರು ಪ್ರಚಾರಕ್ಕೆ ಅಡ್ಡಿ ಪಡಿಸಿದಾಗ ‘ಭಜರಂಗಬಲಿ ಕೀ ಜೈ’ ಎಂದು ಘೋಷಣೆ ಕೂಗಿ ಅವರನ್ನು ಲಕ್ಷ್ಮೀ ಹೆಬ್ಬಾಳ್ಕರ್ ಸಮಾಧಾನಪಡಿಸಿದ ಘಟನೆ ನಡೆದಿದೆ. ಬೆಳಗಾವಿ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ನಡೆದ ಘಟನೆಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಬಿಡುಗಡೆ ಮಾಡಿದ್ದ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ಮಾಡುವ ಬಗ್ಗೆ ಪ್ರಸ್ತಾಪಿಸಲಾಗಿತ್ತು. ಈ ಬಗ್ಗೆ ಭಾರೀ ಚರ್ಚೆಗಳು ನಡೆದಿದ್ದವು. ನಿನ್ನೆ ರಾತ್ರಿ ನಡೆದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಚಾರಕ್ಕೆ ಭಜರಂಗದಳ ಕಾರ್ಯಕರ್ತರು ಅಡ್ಡಿಪಡಿಸಿದ್ದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಘೇರಾವ್ ಮಾಡಿ ಕಾರ್ಯಕರ್ತರು ಜೈ ಭಜರಂಗಬಲಿ ಎಂದು ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಕೂಡ ಜೈ ಭಜರಂಗ ಬಲಿ ಎಂದು ಘೋಷಣೆ ‌ಕೂಗಿದ್ದಾರೆ. ಜೈ ಭಜರಂಗಬಲಿ, ಪವನಪುತ್ರ ಹನುಮಾನ್ ಕೀ ಜೈ‌ ಎಂದು ಘೋಷಣೆ ಕೂಗಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.