ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು

ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು

ಅಮೀನ್​ ಸಾಬ್​
| Updated By: Ganapathi Sharma

Updated on: Sep 17, 2024 | 11:45 AM

ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಮಹಿಳೆ ಬಗ್ಗೆ ಅವಾಚ್ಯ ಪದ ಬಳಸಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಮುನಿರತ್ನನ ಆ ಭಾಷೆ ಕೇಳಲು ಸಾಧ್ಯವಾಗಿಲ್ಲ’ ಎಂದು ಅವರು ಹೇಳಿದ್ದಾರೆ. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಅವರಾಡಿರುವ ಮಾತುಗಳನ್ನು ಇಲ್ಲಿ ನೋಡಿ.

ಕಲಬುರಗಿ, ಸೆಪ್ಟೆಂಬರ್ 17: ಕಾಂಗ್ರೆಸ್ ಷಡ್ಯಂತ್ರದಿಂದ ಬಿಜೆಪಿ ಶಾಸಕ ಮುನಿರತ್ನರನ್ನು ಬಂಧಿಸಲಾಗಿದೆ ಎಂಬ ಆರೋಪಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಷಡ್ಯಂತ್ರ ಮಾಡುವ ಅನಿವಾರ್ಯತೆ ಇಲ್ಲ. ಬಿಜೆಪಿ ರೀತಿ ಕಾಂಗ್ರೆಸ್ ಷಡ್ಯಂತ್ರ ಮಾಡಿದರೆ ಅವರಿಗೆ (ಬಿಜೆಪಿಯವರಿಗೆ) ಜೈಲುಗಳು ಸಾಕಾಗಲ್ಲ ಎಂದರು.

ರಾಜಕಾರಣಿಗಳು ಅಂದ ಮೇಲೆ ನಮ್ಮನ್ನು ಜನ ಅನುಸರಣೆ ಮಾಡುತ್ತಾರೆ. ನಮ್ಮ ಜವಾಬ್ದಾರಿ ಏನು ಎಂಬುದನ್ನು ತಿಳಿದುಕೊಂಡು ಮಾತನಾಡಬೇಕು. ಹೆಣ್ಣು ಮಕ್ಕಳ ಬಗ್ಗೆ ನಾಲಗೆ ಬಿಗಿ ಹಿಡಿದುಕೊಂಡು ಮಾತನಾಡಬೇಕು ಎಂದು ಅವರು ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ