Belagavi Rural MLA: ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಲಕ್ಷ್ಮಿ ಹೆಬ್ಬಾಳ್ಕರ್ ಸಿದ್ದಗಂಗಾ ಮಠಕ್ಕೆ ತೆರಳಿ ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದರು!

ಅರುಣ್​ ಕುಮಾರ್​ ಬೆಳ್ಳಿ

Updated on: May 22, 2023 | 6:08 PM

ಮಹಿಳಾ ಕೋಟಾದಡಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಮಂತ್ರಿ ಸ್ಥಾನ ಸಿಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ತುಮಕೂರು: ವಿಧಾನ ಸಭೆಯಲ್ಲಿ ಇಂದು ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಕಾಂಗ್ರೆಸ್ ಪಕ್ಷದ ಹೆಚ್ಚಿನ ಸದಸ್ಯರು ಜಿಲ್ಲೆಯಲ್ಲಿರುವ ಸಿದ್ದಗಂಗಾ ಮಠಕ್ಕೆ ಶಿವಕುಮಾರ್ ಸ್ವಾಮೀಜಿ (Shivakumar Swamiji) ಗದ್ದುಗೆಯ ದರ್ಶನ ಪಡೆದರು. ಬೆಂಗಳೂರು ಗ್ರಾಮೀಣ (Belagavi Rural) ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಸಹ ಸ್ವಾಮೀಜಿ ಗದ್ದುಗೆ ದರ್ಶನ ಪಡೆದರು. ಗದ್ದುಗೆಗೆ ಪೂಜೆ ಸಲ್ಲಿಸಿದ ಬಳಿಕ ವಟುವೊಬ್ಬರು ಆರತಿ ತಟ್ಟೆ ತೆಗೆದುಕೊಂಡು ಬಂದಾಗ ಶಾಸಕಿ ತಟ್ಟೆಗೆ ರೂ. 500ರ ನೋಟ್ ಹಾಕುವುದನ್ನು ವಿಡಿಯೋದಲ್ಲಿ ನೋಡಬಹುದು. ಮಹಿಳಾ ಕೋಟಾದಡಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಮಂತ್ರಿ ಸ್ಥಾನ ಸಿಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: May 22, 2023 06:07 PM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.