Lakshmi Hebbalkar: ಶರದ್ ಪವಾರ್ ಸ್ವಾಗತಕ್ಕೆ ಮುಂದಾದ ಹೆಬ್ಬಾಳ್ಕರ್, ಎಂಬಿ ಪಾಟೀಲ್
ಮುಂಬೈನಿಂದ ವಿಶೇಷ ವಿಮಾನದಲ್ಲಿ ಹೆಚ್ಎಎಲ್ಗೆ ಆಗಮಿಸಿದ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನ ಸ್ವಾಗತಿಸಲು ಹೆಬ್ಬಾಳ್ಕರ್ ಹಾಗೂ ಎಂಬಿ ಪಾಟೀಲ್ ತಾ ಮುಂದೆ, ತಾ ಮುಂದೆ ಎಂದು ರೇಸ್ಗೆ ಬಿದ್ದ ಘಟನೆ ನಡೆಯಿತು.
ಬೆಂಗಳೂರು: ಇಂದು(ಜು.18) ತಾಜ್ವೆಸ್ಟ್ ಎಂಡ್ ಹೋಟೆಲ್ನಲ್ಲಿ ವಿಪಕ್ಷಗಳ ಮಹಾಮೈತ್ರಿಕೂಟ(Grand Alliance)ಸಭೆ ಹಿನ್ನೆಲೆ ದೆಹಲಿ ಮುಖ್ಯಮಂತ್ರಿ, ಆಪ್ ಮುಖ್ಯಸ್ಥ ಕೇಜ್ರಿವಾಲ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ‘ಕೈ’ ನಾಯಕರಾದ ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್ ಪಂಜಾಬ್ ಸಿಎಂ ಭಗವಂತ್ ಮಾನ್, ಜಾರ್ಖಂಡ್ ಸಿಎಂ ಸೊರೇನ್ ಪಶ್ಚಿಮ ಬಂಗಾಳ ಸಿಎಂ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ತಮಿಳುನಾಡು ಸಿಎಂ, ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್, ಬಿಹಾರ ಮುಖ್ಯಮಂತ್ರಿ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್, ಮಾಜಿ ಸಿಎಂಗಳಾದ ಓಮರ್ ಅಬ್ದುಲ್ಲಾ, ಉದ್ಧವ್ ಠಾಕ್ರೆ, ಲಾಲೂ ಪ್ರಸಾದ್, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ಮಾಜಿ ಸಿಎಂ ಅಖಿಲೇಶ್ ಯಾದವ್ ಮುಖಂಡರಾದ ಅಭಿಷೇಕ್ ಬ್ಯಾನರ್ಜಿ, ಆದಿತ್ಯ ಠಾಕ್ರೆ ಸೇರಿದಂತೆ ಮಹಾಮೈತ್ರಿಕೂಟದ 40ಕ್ಕೂ ಹೆಚ್ಚು ನಾಯಕರು ಉಪಸ್ಥಿತರಿದ್ದಾರೆ. ಈ ವೇಳೆ ಮುಂಬೈನಿಂದ ವಿಶೇಷ ವಿಮಾನದಲ್ಲಿ ಹೆಚ್ಎಎಲ್ಗೆ ಆಗಮಿಸಿದ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನ ಸ್ವಾಗತಿಸಲು ಹೆಬ್ಬಾಳ್ಕರ್ ಮತ್ತು ಎಮ್ ಬಿ ಪಾಟೀಲ್ ಮುಂದಾದರು.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ