Lakshmi Hebbalkar: ಶರದ್ ಪವಾರ್​ ಸ್ವಾಗತಕ್ಕೆ ಮುಂದಾದ ಹೆಬ್ಬಾಳ್ಕರ್, ಎಂಬಿ ಪಾಟೀಲ್

Edited By:

Updated on: Jul 19, 2023 | 12:53 PM

ಮುಂಬೈನಿಂದ ವಿಶೇಷ ವಿಮಾನದಲ್ಲಿ ಹೆಚ್​ಎಎಲ್​ಗೆ ಆಗಮಿಸಿದ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನ ಸ್ವಾಗತಿಸಲು ಹೆಬ್ಬಾಳ್ಕರ್ ಹಾಗೂ ಎಂಬಿ ಪಾಟೀಲ್ ತಾ ಮುಂದೆ, ತಾ ಮುಂದೆ ಎಂದು ರೇಸ್​ಗೆ ಬಿದ್ದ ಘಟನೆ ನಡೆಯಿತು.

ಬೆಂಗಳೂರು: ಇಂದು(ಜು.18) ತಾಜ್​ವೆಸ್ಟ್​ ಎಂಡ್​​ ಹೋಟೆಲ್​ನಲ್ಲಿ ವಿಪಕ್ಷಗಳ ಮಹಾಮೈತ್ರಿಕೂಟ(Grand Alliance)ಸಭೆ ಹಿನ್ನೆಲೆ ದೆಹಲಿ ಮುಖ್ಯಮಂತ್ರಿ, ಆಪ್ ಮುಖ್ಯಸ್ಥ ಕೇಜ್ರಿವಾಲ್​ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ‘ಕೈ’ ನಾಯಕರಾದ ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್​​​ ಪಂಜಾಬ್ ಸಿಎಂ ಭಗವಂತ್ ಮಾನ್, ಜಾರ್ಖಂಡ್ ಸಿಎಂ ಸೊರೇನ್ ಪಶ್ಚಿಮ ಬಂಗಾಳ ಸಿಎಂ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ತಮಿಳುನಾಡು ಸಿಎಂ, ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್​, ಬಿಹಾರ ಮುಖ್ಯಮಂತ್ರಿ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್, ಮಾಜಿ ಸಿಎಂಗಳಾದ ಓಮರ್ ಅಬ್ದುಲ್ಲಾ, ಉದ್ಧವ್ ಠಾಕ್ರೆ, ಲಾಲೂ ಪ್ರಸಾದ್, ಎನ್​ಸಿಪಿ ಮುಖ್ಯಸ್ಥ ಶರದ್​​ ಪವಾರ್​​, ಮಾಜಿ ಸಿಎಂ ಅಖಿಲೇಶ್ ಯಾದವ್​​ ಮುಖಂಡರಾದ ಅಭಿಷೇಕ್ ಬ್ಯಾನರ್ಜಿ, ಆದಿತ್ಯ ಠಾಕ್ರೆ ಸೇರಿದಂತೆ ಮಹಾಮೈತ್ರಿಕೂಟದ 40ಕ್ಕೂ ಹೆಚ್ಚು ನಾಯಕರು ಉಪಸ್ಥಿತರಿದ್ದಾರೆ. ಈ ವೇಳೆ ಮುಂಬೈನಿಂದ ವಿಶೇಷ ವಿಮಾನದಲ್ಲಿ ಹೆಚ್​ಎಎಲ್​ಗೆ ಆಗಮಿಸಿದ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನ ಸ್ವಾಗತಿಸಲು ಹೆಬ್ಬಾಳ್ಕರ್ ಮತ್ತು ಎಮ್​ ಬಿ ಪಾಟೀಲ್​ ಮುಂದಾದರು.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 18, 2023 12:37 PM
Follow Us
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More