‘ಲಕ್ಷ್ಮಿಪುತ್ರ’ ಚಿತ್ರದಲ್ಲಿ ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ

Updated on: Nov 20, 2026 | 4:56 PM

ಚಿಕ್ಕಣ್ಣ ಅವರು ಹೀರೋ ಆಗಿ ನಟಿಸಿರುವ ‘ಲಕ್ಷ್ಮಿಪುತ್ರ’ ಸಿನಿಮಾದ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್ ಅವರು ಅತಿಥಿಯಾಗಿ ಪಾಲ್ಗೊಂಡಿದ್ದಾರೆ. ಈ ವೇಳೆ ಅವರು ಚಿಕ್ಕಣ್ಣನ ಡ್ಯಾನ್ಸ್ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ವೇದಿಕೆಯಲ್ಲಿ ಅವರು ಮಾತನಾಡಿದ ವಿಡಿಯೋ ಇಲ್ಲಿದೆ ನೋಡಿ..

ಚಿಕ್ಕಣ್ಣ ಅವರು ಹೀರೋ ಆಗಿ ನಟಿಸಿರುವ ‘ಲಕ್ಷ್ಮಿಪುತ್ರ’ ಸಿನಿಮಾದ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಶಿವರಾಜ್​ಕುಮಾರ್ ಅವರು ಅತಿಥಿಯಾಗಿ ಪಾಲ್ಗೊಂಡಿದ್ದಾರೆ. ಈ ವೇಳೆ ಅವರು ಚಿಕ್ಕಣ್ಣನ ಡ್ಯಾನ್ಸ್ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅವರು ಮಾತನಾಡಿದ ವಿಡಿಯೋ ಇಲ್ಲಿದೆ. ‘ಚಿಕ್ಕಣ್ಣ ಸೂಪರ್. ತುಂಬಾ ಚೆನ್ನಾಗಿ ಡ್ಯಾನ್ಸ್ ಮಾಡಿದ್ದಾರೆ. ಅವರ ಡ್ಯಾನ್ಸ್ ನೋಡಿದರೆ ಪ್ರಭುದೇವ ಡ್ಯಾನ್ಸ್ ಮಾಡಿದ ಹಾಗಿದೆ. ಈ ಹಿಂದೆ ನಾನು ಅವರ ಡ್ಯಾನ್ಸ್ ನೋಡಿದ್ದೆ. ಈ ಸಿನಿಮಾದಲ್ಲಿ ಇನ್ನೂ ಲೀಲಾಜಾಲವಾಗಿ ಡ್ಯಾನ್ಸ್ ಮಾಡಿದ್ದಾರೆ. ಭೂಷಣ್ ಅವರ ನೃತ್ಯ ಸಂಯೋಜನೆ, ಅರ್ಜುನ್ ಜನ್ಯ ಅವರ ಸಂಗೀತ ಬಹಳ ಚೆನ್ನಾಗಿದೆ’ ಎಂದು ಶಿವರಾಜ್​ಕುಮಾರ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More