ಹಾಲಿನ ಅಭಿಷೇಕದ ವೇಳೆ ಶಿವಲಿಂಗವನ್ನು ತಬ್ಬಿಕೊಂಡ ಲಾಲು ಪ್ರಸಾದ್ ಯಾದವ್ ಮಗ ತೇಜ್ ಪ್ರತಾಪ್
ಲಾಲು ಪ್ರಸಾದ್ ಯಾದವ್ ಅವರ ಮಗ ತೇಜ್ ಪ್ರತಾಪ್ ಯಾದವ್ ಅವರು ಧಾರ್ಮಿಕ ಅವತಾರದಲ್ಲಿ ಕಾಣಿಸಿಕೊಂಡಿರುವುದು ಇದೇ ಮೊದಲಲ್ಲ. ಕಳೆದ ವರ್ಷ ಹೋಳಿ ಹಬ್ಬದಲ್ಲಿ ಶ್ರೀಕೃಷ್ಣನ ವೇಷ ಧರಿಸಿದ್ದರು. ಇದೀಗ ಅವರು ಶಿವಲಿಂಗವನ್ನೇ ತಬ್ಬಿಕೊಂಡಿರುವ ವಿಡಿಯೋ ವೈರಲ್ ಆಗಿದೆ.
ಪಾಟ್ನಾ: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಲಾಲು ಪ್ರಸಾದ್ ಯಾದವ್ ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಶಿವಲಿಂಗವನ್ನು ತಬ್ಬಿಕೊಂಡು ಪವಿತ್ರ ಹಿಂದೂ ಆಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಹಾಲಿನ ಅಭಿಷೇಕ ಮಾಡುವಾಗ ತೇಜ್ ಪ್ರತಾಪ್ ಯಾದವ್ ಶಿವಲಿಂಗವನ್ನು ತಬ್ಬಿಕೊಂಡಿರುವ ವಿಡಿಯೋ ವೈರಲ್ ಆಗಿದೆ.
ತೇಜ್ ಪ್ರತಾಪ್ ಯಾದವ್ ತಾವು ಶಿವಲಿಂಗವನ್ನು ತಬ್ಬಿಕೊಳ್ಳುತ್ತಿರುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ. “ಮಹಾದೇವನು ಅಂತಿಮ ಸತ್ಯದ ಸಂಕೇತವಾಗಿದೆ. ಮಹಾದೇವನನ್ನು ಅಪ್ಪಿಕೊಳ್ಳುವುದು ಎಂದರೆ ನಮ್ಮಲ್ಲಿನ ಆಳವಾದ, ಅತ್ಯಂತ ಆಳವಾದ ಅಂಶಗಳನ್ನು ಅಳವಡಿಸಿಕೊಳ್ಳುವುದು. ಶಾಂತಿಯನ್ನು ಕಂಡುಕೊಳ್ಳಲು ಮಹಾದೇವನನ್ನು ಹುಡುಕುವುದು ಎಂದರ್ಥ.” ಎಂದು ಅವರು ಪೋಸ್ಟ್ ಮಾಡಿದ್ದಾರೆ.
ತೇಜ್ ಪ್ರತಾಪ್ ಯಾದವ್ ಅವರು ಧಾರ್ಮಿಕ ಅವತಾರದಲ್ಲಿ ಕಾಣಿಸಿಕೊಂಡಿರುವುದು ಇದೇ ಮೊದಲಲ್ಲ. ಕಳೆದ ವರ್ಷ ಹೋಳಿ ಹಬ್ಬದಲ್ಲಿ ಶ್ರೀಕೃಷ್ಣನ ವೇಷ ಧರಿಸಿದ್ದರು. ಆರ್‌ಜೆಡಿ ನಾಯಕ ತೇಜ್ ಪ್ರತಾಪ್ ಯಾದವ್ ತಮ್ಮ ಸಹೋದರ ತೇಜಸ್ವಿ ಯಾದವ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರನ್ನು ತಮ್ಮ ಪೋಸ್ಟ್‌ನಲ್ಲಿ ಟ್ಯಾಗ್ ಮಾಡಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!

