Video: 10 ಕೋಟಿ ರೂ. ಬೆಲೆಯ ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ತಂಬಾಕು ಉದ್ಯಮಿ ಕೆಕೆ ಮಿಶ್ರಾ ಅವರ ಮಗ 10 ಕೋಟಿ ರೂ. ಬೆಲೆಯ ಕಾರನ್ನು ಪಾದಚಾರಿಗಳು ಹಾಗೂ ವಾಹನಗಳ ಮೇಲೆ ಹತ್ತಿಸಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ.ಲ್ಯಾಂಬೋರ್ಘಿನಿ ರೆವೆಲ್ಟೊ ಎಂಬ ಐಷಾರಾಮಿ ಕಾರನ್ನು ಅತಿ ವೇಗದಲ್ಲಿ ಚಲಾಯಿಸಿದ್ದ, ಆ ಸಮಯದಲ್ಲಿ ಚಾಲಕ ಶಿವಂ ಮಿಶ್ರಾ ಮದ್ಯಪಾನ ಮಾಡಿದ್ದರು ಎನ್ನಲಾಗಿದೆ. ಕಾರು ಮೊದಲು ಆಟೋರಿಕ್ಷಾಗೆ ಡಿಕ್ಕಿ ಹೊಡೆದು ನಂತರ ನಿಲ್ಲಿಸಿದ್ದ ರಾಯಲ್ ಎನ್‌ಫೀಲ್ಡ್ ಬೈಕ್ಗೆ ಡಿಕ್ಕಿ ಹೊಡೆದು, ಅದರ ಸವಾರ ಸುಮಾರು 10 ಅಡಿ ಎತ್ತರಕ್ಕೆ ಗಾಳಿಯಲ್ಲಿ ಹಾರಿ ಬಿದ್ದಿದ್ದಾರೆ.
ಕಾನ್ಪುರ, ಫೆಬ್ರವರಿ 09: ತಂಬಾಕು ಉದ್ಯಮಿ ಕೆಕೆ ಮಿಶ್ರಾ ಅವರ ಮಗ 10 ಕೋಟಿ ರೂ. ಬೆಲೆಯ ಕಾರನ್ನು ಪಾದಚಾರಿಗಳು ಹಾಗೂ ವಾಹನಗಳ ಮೇಲೆ ಹತ್ತಿಸಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ.ಲ್ಯಾಂಬೋರ್ಘಿನಿ ರೆವೆಲ್ಟೊ ಎಂಬ ಐಷಾರಾಮಿ ಕಾರನ್ನು ಅತಿ ವೇಗದಲ್ಲಿ ಚಲಾಯಿಸಿದ್ದ, ಆ ಸಮಯದಲ್ಲಿ ಚಾಲಕ ಶಿವಂ ಮಿಶ್ರಾ ಮದ್ಯಪಾನ ಮಾಡಿದ್ದರು ಎನ್ನಲಾಗಿದೆ. ಕಾರು ಮೊದಲು ಆಟೋರಿಕ್ಷಾಗೆ ಡಿಕ್ಕಿ ಹೊಡೆದು ನಂತರ ನಿಲ್ಲಿಸಿದ್ದ ರಾಯಲ್ ಎನ್‌ಫೀಲ್ಡ್ ಬೈಕ್ಗೆ ಡಿಕ್ಕಿ ಹೊಡೆದು, ಅದರ ಸವಾರ ಸುಮಾರು 10 ಅಡಿ ಎತ್ತರಕ್ಕೆ ಗಾಳಿಯಲ್ಲಿ ಹಾರಿ ಬಿದ್ದಿದ್ದಾರೆ. ಕಾರು ಬೈಕ್ನ ಮುಂಭಾಗದ ಚಕ್ರವನ್ನು ಸ್ವಲ್ಪ ದೂರ ಎಳೆದುಕೊಂಡು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿತ್ತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us