ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆಯಿಂದ ಜಮೀನು ಪಡೆಯುವ ಪ್ರಕ್ರಿಯೆ ಜಾರಿಯಲ್ಲಿದೆ: ಶಿವಕುಮಾರ್

ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆಯಿಂದ ಜಮೀನು ಪಡೆಯುವ ಪ್ರಕ್ರಿಯೆ ಜಾರಿಯಲ್ಲಿದೆ: ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
|

Updated on: Sep 02, 2024 | 1:08 PM

ರಾಜ್ಯದ ನಾನಾ ಭಾಗಗಳಲ್ಲಿ ವ್ಯರ್ಥವಾಗುತ್ತಿರುವ ನೀರನ್ನು ಟ್ಯಾಪ್ ಮಾಡುವ ಯೋಜನೆಗಾಗಿ ಡಿಪಿಅರ್ ಒಂದನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಶಿವಕುಮಾರ್ ಹೇಳಿದರು. ಈ ಯೋಜನೆಗೆಂದೇ ಒಂದು ಪ್ರತ್ಯೇಕ ತಂಡವನ್ನು ರಚಿಸಿ ಜವಾಬ್ದಾರಿ ವಹಿಸಿಕೊಡಲಾಗಿದೆ ಎಂದು ಅವರು ಹೇಳಿದರು.

ಬೆಂಗಳೂರು: ನಗರದಲ್ಲಿ ಇಂದು ಸುದ್ದಿಗೋಷ್ಠಿಯೊಂದನ್ನು ಉದ್ದೇಶಿಸಿ ಮಾತಾಡಿ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ರಾಜ್ಯದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆ ಬಗ್ಗೆ ವಿವರಣೆ ನೀಡಿದರು. ಯೋಜನೆ ಅಂಗವಾಗಿ ವಾಣಿ ವಿಲಾಸ ಸಾಗರ ಜಲಾಶಯಕ್ಕೆ 130 ಕಿಮೀ ದೂರದಿಂದ ನೀರು ಬಿಡುಗಡೆ ಮಾಡಲಾಗುವುದು ಎಂದ ಅವರು ಅಲ್ಲಿಂದ 32 ಕಿಮೀ ಎಸ್ಕೇಪ್ ರೂಟ್ ಗೊತ್ತು ಮಾಡಲಾಗಿದೆ ಎಂದರು. ಯೋಜನೆಗೆ ಅರಣ್ಯ ಇಲಾಖೆಯಿಂದ 502 ಎಕರೆ ಜಮೀನು ಪಡೆದುಕೊಳ್ಳಬೇಕಿದೆ ಮತ್ತು ಆ ಪ್ರಕ್ರಿಯೆ 5-6 ತಿಂಗಳಲ್ಲಿ ಕೊನೆಗೊಳ್ಳಲಿದೆ ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ಎತ್ತಿನಹೊಳೆ ಯೋಜನೆ ನಾವೇ ಪೂರ್ಣಗೊಳಿಸುತ್ತೇವೆ: ಸಿಎಂ ಸಿದ್ದರಾಮಯ್ಯ ಭರವಸೆ