Mysuru Cricket Stadium: ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ

Updated By: Ganapathi Sharma

Updated on: May 14, 2025 | 2:06 PM

ಮೈಸೂರು ಕ್ರಿಕೆಟ್ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಒಡೆಯರ್ ಬುಧವಾರ ಮಹತ್ವದ ಮಾಹಿತಿ ನೀಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಭೂಸ್ವಾಧೀನ ಪ್ರಕ್ರಿಯೆ ವಿಳಂಬವಾಗಿದ್ದು ನಿಜ. ಆದರೆ, ಈಗ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಶೀಘ್ರದಲ್ಲೇ ಅದು ಮುಗಿದು ನಂತರದ ಕ್ರಮಗಳು ಆರಂಭವಾಗಲಿವೆ ಎಂದರು.

ಮೈಸೂರು, ಮೇ 14: ಮೈಸೂರಿನಲ್ಲಿ ಒಂದು ಕ್ರಿಕೆಟ್ ಸ್ಟೇಡಿಯಂ ಬೇಕು ಎಂಬ ನಿರ್ಣಯಕ್ಕೆ ಕೆಎಸ್​​ಸಿಎ ಬಂದಿತ್ತು. ನಂತರ ಕೆಎಸ್​​ಸಿಎ ಅಧಿಕಾರಿಗಳು ಮೈಸೂರು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದರು. ನಂತರ ಸರ್ಕಾರಕ್ಕೆ ಮನವಿ ಮಾಡಲಾಯಿತು. ಆಗ ಬಿಜೆಪಿ ಸರ್ಕಾರ ಇತ್ತು. ಭೂಮಿ ಗುರುತಿಸಲಾಗಿದೆ, ಅದನ್ನು ಸ್ವಾಧೀನಪಡಿಸಿಕೊಳ್ಳಲು ನೆರವಾಗಬೇಕು ಎಂದು ಕೆಎಸ್​​ಸಿಎ ಮನವಿ ಮಾಡಿತ್ತು. ಅದು ಬಹಳ ವಿಳಂಬ ಆಗುತ್ತಿತ್ತು. ಆ ಬಳಿಕ ಜಿಲ್ಲಾಧಿಕಾರಿ ಭೂಮಿ ಗುರುತಿಸಿದ್ದರು. ಮುಖ್ಯಮಂತ್ರಿ ಬಳಿ ನಾವು ಮನವಿ ಮಾಡಿದ್ದು, ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದರು.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: May 14, 2025 02:04 PM