ಜಮೀರ್ ಹೇಳುವ ಭೂಮಿಯನ್ನು ರೈತರು ಸಾಗುವಳಿ ಮಾಡಿಕೊಂಡು ಬಂದಿದ್ದಾರೆ: ಬಸನಗೌಡ ಯತ್ನಾಳ್

ಜಮೀರ್ ಹೇಳುವ ಭೂಮಿಯನ್ನು ರೈತರು ಸಾಗುವಳಿ ಮಾಡಿಕೊಂಡು ಬಂದಿದ್ದಾರೆ: ಬಸನಗೌಡ ಯತ್ನಾಳ್

ಅರುಣ್​ ಕುಮಾರ್​ ಬೆಳ್ಳಿ
|

Updated on: Oct 14, 2024 | 6:00 PM

ಸಚಿವ ಜಮೀರ್ ಅಹ್ಮದ್ ಜಿಲ್ಲಾಧಿಕಾರಿ ಮತ್ತು ತಹಸೀಲ್ದಾರ್​ ಗಳನ್ನು ಬಯ್ಯುತ್ತಾ ಮೌಖಿಕ ಆದೇಶಗಳನ್ನು ನೀಡುತ್ತಿದ್ದಾರೆ, ಆದರೆ ಮೌಖಿಕ ಆದೇಶಗಳಿಗೆ ಕಿಮ್ಮತ್ತಿರಲ್ಲ, ಜಮೀರ್ ಎಲ್ಲೇ ಹೋದರೂ ಅವರನ್ನು ಹಿಂಬಾಲಿಸಿ ಆಯಾ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರಗಳನ್ನು ಸಲ್ಲಿಸುವುದಾಗಿ ಯತ್ನಾಳ್ ಹೇಳಿದರು.

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಹನ್ನೊಂದು ಸಾವಿರ ಎಕರೆ ಜಮೀನು ವಕ್ಫ್ ಬೋರ್ಡ್​ಗೆ ಸೇರಿದ್ದು ಎಂದು ಸಚಿವ ಜಮೀರ್ ಅಕ್ಮದ್ ಹೇಳಿದರೆ, ಸಚಿವರಾಡುವ ಮಾತಿಗೆ ತಲೆಬುಡವಿಲ್ಲ, ಅವರು ಹೇಳಿರುವ ಜಮೀನು ಸಂಘಸಂಸ್ಥೆಗಳು ದಾನದ ರೂಪದಲ್ಲಿ ಕೊಟ್ಟಿದ್ದು ಮತ್ತು ಆ ಜಮೀನುಗಳಲ್ಲಿ ರೈತರು ದಶಕಗಳಿಂದ ಉಳುಮೆ ಮಾಡಿಕೊಂಡು ಬಂದಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳುತ್ತಾರೆ. ಮುಂದಿನ ಸಂಸತ್ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿಯರವರು ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲಿದ್ದಾರೆ, ಮಸೂದೆ ಪಾಸ್ ಆಗುವವರೆಗೆ ಜಮೀರ್ ಅಹ್ಮದ್ ಅವರ ಮೌಖಿಕ ಆದೇಶಗಳನ್ನು ಗಣನೆಗೆ ತೆಗೆದುಕೊಳ್ಳಬಾರದೆಂದು ನಾಳೆ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸುವುದಾಗಿ ಯತ್ನಾಳ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬಸನಗೌಡ ಪಾಟೀಲ್ ಯತ್ನಾಳ್​ಗೆ ಸಿಎಂ ಸಿದ್ದರಾಮಯ್ಯ ಕರೆ: ಪ್ರತಿಭಟನೆ ಕೈಬಿಡಲು ಮನವಿ