ಉತ್ತರ ಪ್ರದೇಶದ ಕಲ್ಲು ಗಣಿಗಾರಿಕೆ ವೇಳೆ ಭೂಕುಸಿತವಾಗಿ ಓರ್ವ ಸಾವು; ಹಲವು ಕಾರ್ಮಿಕರು ಕಣ್ಮರೆ

Updated on: Nov 15, 2025 | 10:19 PM

ಉತ್ತರ ಪ್ರದೇಶದ ಸೋನಭದ್ರದಲ್ಲಿ ಕಲ್ಲು ಗಣಿಗಾರಿಕೆಯ ವೇಳೆ ಸಂಭವಿಸಿದ ಭೂಕುಸಿತದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಈ ವೇಳೆ ಹಲವಾರು ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ಈ ಘಟನೆ ನಡೆದಾಗ ಸುಮಾರು 12ರಿಂದ 15 ಕಾರ್ಮಿಕರು ಸ್ಥಳದಲ್ಲಿದ್ದರು ಮತ್ತು ಯಾರೂ ತಕ್ಷಣ ಈ ಅವಘಡದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಒಬ್ಬ ಕಾರ್ಮಿಕನ ಮೃತದೇಹ ಪತ್ತೆಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಸೋನಭದ್ರ, ನವೆಂಬರ್ 15: ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದ ಕಲ್ಲು ಗಣಿಗಾರಿಕೆಯ (stone quarry) ಒಂದು ಭಾಗ ಕುಸಿದ ನಂತರ ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ದಲಾ ಪ್ರದೇಶದಲ್ಲಿರುವ ಕಲ್ಲು ಗಣಿಗಾರಿಕೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಬೆಟ್ಟದ ಇಳಿಜಾರಿನಿಂದ ದೊಡ್ಡ ಬಂಡೆಯೊಂದು ಇದ್ದಕ್ಕಿದ್ದಂತೆ ಕೆಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಿದ್ದು, ಅವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ.

ಈ ಘಟನೆ ನಡೆದಾಗ ಸುಮಾರು 12ರಿಂದ 15 ಕಾರ್ಮಿಕರು ಸ್ಥಳದಲ್ಲಿದ್ದರು ಮತ್ತು ಯಾರೂ ತಕ್ಷಣ ಈ ಅವಘಡದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಒಬ್ಬ ಕಾರ್ಮಿಕನ ಮೃತದೇಹ ಪತ್ತೆಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಗಣಿಗಾರಿಕೆ ಸ್ಥಳದಲ್ಲಿ ಕೆಲಸ ಮಾಡುವವರು 9 ಕಂಪ್ರೆಷನ್ ಯಂತ್ರಗಳನ್ನು ಬಳಸಿ ಬಂಡೆಯಲ್ಲಿ ರಂಧ್ರಗಳನ್ನು ಕೊರೆಯುತ್ತಿದ್ದಾಗ ಮೇಲಿನ ಬಂಡೆಯ ದೊಡ್ಡ ಭಾಗವು ಇದ್ದಕ್ಕಿದ್ದಂತೆ ಬಿರುಕು ಬಿಟ್ಟು ಕುಸಿದಿದೆ. ಇದರಿಂದ ಹಲವಾರು ಕಾರ್ಮಿಕರು ಅವಶೇಷಗಳ ಕೆಳಗೆ ಹೂತುಹೋಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ