Video: ಇಡುಕ್ಕಿಯಲ್ಲಿ ಭೂಕುಸಿತ, ಅವಶೇಷಗಳಡಿ ಸಿಲುಕಿರುವ ದಂಪತಿ

Updated on: Oct 26, 2025 | 7:52 AM

ಅಡಿಮಾಲಿಯ ರಾಷ್ಟ್ರೀಯ ಹೆದ್ದಾರಿ ಬಳಿ ಶನಿವಾರ ಭೂಕುಸಿತ ಸಂಭವಿಸಿದ್ದು, ಒಂದು ಕುಟುಂಬ ಈ ಅವಶೇಷಗಳಡಿ ಸಿಲುಕಿರುವ ಮಾಹಿತಿ ಲಭ್ಯವಾಗಿದೆ. ಬಿಜು ಮತ್ತು ಅವರ ಪತ್ನಿ ಸಂಧ್ಯಾ ಎಂದು ಗುರುತಿಸಲಾದ ಇಬ್ಬರು ಮನೆಯೊಳಗೆ ಸಿಲುಕಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ದಂಪತಿ ರಕ್ಷಣಾ ಸಿಬ್ಬಂದಿಗೆ ಸ್ಪಂದಿಸುತ್ತಿದ್ದಾರೆ ಎಂದು ವರದಿಯಾಗಿದೆ. ಇಡುಕ್ಕಿಯ ಕೂಂಪನ್‌ಪಾರ ಬಳಿ ಭೂಕುಸಿತ ಸಂಭವಿಸಿದೆ.ಭೂ ಕುಸಿತದ ಎಚ್ಚರಿಕೆ ನೀಡಲಾಗಿದ್ದ ಕಾರಣ ಈ ಪ್ರದೇಶದ ಹಲವಾರು ಕುಟುಂಬಗಳನ್ನು ಮೊದಲೇ ಸ್ಥಳಾಂತರಿಸಲಾಗಿತ್ತು. ಮಣ್ಣು ನೇರವಾಗಿ ಮನೆಯ ಮೇಲೆ ಬಿದ್ದಿದ್ದು, ನಿವಾಸಿಗಳು ಒಳಗೆ ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯ ಮುಂದುವರೆದಿದೆ.

ಅಡಿಮಾಲಿ, ಅಕ್ಟೋಬರ್ 26: ಕೇರಳದ ಇಡುಕ್ಕಿ ಜಿಲ್ಲೆಯಲ್ಲಿರುವ ಅಡಿಮಾಲಿಯ ರಾಷ್ಟ್ರೀಯ ಹೆದ್ದಾರಿ ಬಳಿ ಶನಿವಾರ ಭೂಕುಸಿತ ಸಂಭವಿಸಿದ್ದು, ಒಂದು ಕುಟುಂಬ ಈ ಅವಶೇಷಗಳಡಿ ಸಿಲುಕಿರುವ ಮಾಹಿತಿ ಲಭ್ಯವಾಗಿದೆ. ಬಿಜು ಮತ್ತು ಅವರ ಪತ್ನಿ ಸಂಧ್ಯಾ ಎಂದು ಗುರುತಿಸಲಾದ ಇಬ್ಬರು ಮನೆಯೊಳಗೆ ಸಿಲುಕಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ದಂಪತಿ ರಕ್ಷಣಾ ಸಿಬ್ಬಂದಿಗೆ ಸ್ಪಂದಿಸುತ್ತಿದ್ದಾರೆ ಎಂದು ವರದಿಯಾಗಿದೆ. ಇಡುಕ್ಕಿಯ ಕೂಂಪನ್‌ಪಾರ ಬಳಿ ಭೂಕುಸಿತ ಸಂಭವಿಸಿದೆ.ಭೂ ಕುಸಿತದ ಎಚ್ಚರಿಕೆ ನೀಡಲಾಗಿದ್ದ ಕಾರಣ ಈ ಪ್ರದೇಶದ ಹಲವಾರು ಕುಟುಂಬಗಳನ್ನು ಮೊದಲೇ ಸ್ಥಳಾಂತರಿಸಲಾಗಿತ್ತು. ಮಣ್ಣು ನೇರವಾಗಿ ಮನೆಯ ಮೇಲೆ ಬಿದ್ದಿದ್ದು, ನಿವಾಸಿಗಳು ಒಳಗೆ ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯ ಮುಂದುವರೆದಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Oct 26, 2025 07:48 AM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More