ಕುಮಟಾ: ದೇವಿಮನೆ ಘಟ್ಟ ಭಾಗ ಕುಸಿತ, ರಾಷ್ಟ್ರೀಯ ಹೆದ್ದಾರಿಯಲ್ಲಿ ಏಕಮುಖ ಸಂಚಾರ

Updated By: ವಿವೇಕ ಬಿರಾದಾರ

Updated on: Jul 28, 2025 | 3:37 PM

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದ್ದರೂ, ಭೂಕುಸಿತಗಳು ಮುಂದುವರೆದಿವೆ. ರಾಷ್ಟ್ರೀಯ ಹೆದ್ದಾರಿ 766(ಇ) ಭೂಕುಸಿತ ಸಂಭವಿಸಿದೆ. ಕುಮಟಾ ತಾಲೂಕಿನಲ್ಲಿ ದೇವಿಮನೆ ಘಟ್ಟದಲ್ಲಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿದಿದೆ. ವಾಹನ ಸಂಚಾರಕ್ಕೆ ತೊಂದರೆಯಾಗಿದ್ದು, ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಭೂಕುಸಿತದಿಂದಾಗಿ ರಸ್ತೆಗಳು ಮುಚ್ಚಲ್ಪಟ್ಟಿವೆ.

ಕಾರವಾರ, ಜುಲೈ 28: ಕರಾವಳಿ ಭಾಗದಲ್ಲಿ ಮಳೆ ಕಡಿಮೆಯಾದರೂ ಭೂಕುಸಿತ ಮಾತ್ರ ನಿಲ್ಲುತ್ತಿಲ್ಲ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕತಗಾಲ ಗ್ರಾಮದ ಬಳಿಯ ದೇವಿಮನೆ ಘಟ್ಟ ಭಾಗ ರಾಷ್ಟ್ರೀಯ ಹೆದ್ದಾರಿ 766 (ಇ) ಮೇಲೆ ಕುಸಿದು ಬಿದ್ದಿದೆ. ಗುಡ್ಡ ಕುಸಿತಗೊಂಡ ಹಿನ್ನೆಲೆಯಲ್ಲಿ ವಾಹನಗಳಿಗೆ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಗುಡ್ಡ ಕಳೆದ ಎರಡು ದಿನಗಳಿಂದ ನಿರಂತರವಾಗಿ ಕುಸಿಯುತ್ತಿದೆ. ಇನ್ನು, ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿ ಮೇಲೂ ಭೂಕುಸಿತವಾಗಿದೆ. ಭಾರಿ ಪ್ರಮಾಣದ ಮಣ್ಣು, ಕಲ್ಲು ಬಂಡೆಗಳು ರಸ್ತೆಗೆ ಅಡ್ಡಲಾಗಿ ಬಿದ್ದಿವೆ.

Published on: Jul 28, 2025 03:37 PM