ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಡೊನಾಲ್ಡ್ ಟ್ರಂಪ್ ಭರ್ಜರಿ ಗೆಲುವು ಸಾಧಿಸುವ ಮೂಲಕ ಈ ಬಾರಿಯ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಕಂಡಿದ್ದರು. ಇಂದು ರಾತ್ರಿ 10.30ಕ್ಕೆ (ಭಾರತೀಯ ಕಾಲಮಾನದ ಪ್ರಕಾರ) ಅವರು ಅಮೆರಿಕದಲ್ಲಿ ಅಧ್ಯಕ್ಷರಾಗಿ 2ನೇ ಬಾರಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಟ್ರಂಪ್ ಪದಗ್ರಹಣಕ್ಕೆ ಇನ್ನು 1 ಗಂಟೆ ಮಾತ್ರ ಬಾಕಿ ಉಳಿದಿದೆ. ಈಗಾಗಲೇ ವೇದಿಕೆಯ ಸುತ್ತ ವಿವಿಧ ದೇಶಗಳ ಗಣ್ಯರು, ಅಮೆರಿಕದ ಗಣ್ಯರು, ರಾಜಕೀಯ ನಾಯಕರು ಆಸೀನರಾಗಿದ್ದಾರೆ.
ವಾಷಿಂಗ್ಟನ್ ಡಿ.ಸಿ.ಯಲ್ಲಿರುವ ಕ್ಯಾಪಿಟಲ್ ಒನ್ ಅರೆನಾದಲ್ಲಿ ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡೊನಾಲ್ಡ್ ಟ್ರಂಪ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಪದಗ್ರಹಣ ಸಮಾರಂಭಕ್ಕೂ ಮುನ್ನ ಇಂದು ಬೆಳಗಿನ ಜಾವದಲ್ಲೇ ಸಾವಿರಾರು ಜನರು ಕೊರೆಯುವ ಚಳಿಯಲ್ಲಿ ನಿಂತು, ಸಮಾರಂಭದ ನೇರ ಪ್ರಸಾರವನ್ನು ವೀಕ್ಷಿಸುವ ಅವಕಾಶಕ್ಕಾಗಿ ಸಾಲುಗಟ್ಟಿ ನಿಂತಿದ್ದರು. ಅಮೆರಿಕದ ಕಾಲಮಾನದ ಪ್ರಕಾರ ಮಧ್ಯಾಹ್ನ 12.30ಕ್ಕೆ ಪ್ರಮಾಣವಚನ ಸ್ವೀಕಾರ ನಡೆಯಲಿದೆ. ಟ್ರಂಪ್ ಪದಗ್ರಹಣಕ್ಕೆ ಇನ್ನು 1 ಗಂಟೆ ಮಾತ್ರ ಬಾಕಿ ಉಳಿದಿದೆ. ಈಗಾಗಲೇ ವೇದಿಕೆಯ ಸುತ್ತ ವಿವಿಧ ದೇಶಗಳ ಗಣ್ಯರು, ಅಮೆರಿಕದ ಗಣ್ಯರು, ರಾಜಕೀಯ ನಾಯಕರು ಆಸೀನರಾಗಿದ್ದಾರೆ. ಹಲವು ಕಡೆಗಳಲ್ಲಿ ಜನರಿಗೆ ಟ್ರಂಪ್ ಪ್ರಮಾಣವಚನದ ನೇರ ಪ್ರಸಾರ ವೀಕ್ಷಿಸಲು ಬೃಹತ್ ಪರದೆಗಳನ್ನು ಹಾಕಲಾಗಿದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos