AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಕೊನೆಯ ಆಷಾಢ ಶುಕ್ರವಾರ: ನಾಡ ದೇವಿ ಚಾಮುಂಡಿ ಬೆಟ್ಟದಲ್ಲಿ ಭಕ್ತ ಸಾಗರ

ಇಂದು ಕೊನೆಯ ಆಷಾಢ ಶುಕ್ರವಾರ: ನಾಡ ದೇವಿ ಚಾಮುಂಡಿ ಬೆಟ್ಟದಲ್ಲಿ ಭಕ್ತ ಸಾಗರ

ರಾಮ್​, ಮೈಸೂರು
| Edited By: |

Updated on: Aug 07, 2026 | 11:35 AM

Share

ಇಂದು ಆಷಾಢ ಮಾಸದ ಕೊನೆಯ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ನಾಡದೇವಿ ಚಾಮುಂಡೇಶ್ವರಿ ದೇವಾಲಯದಲ್ಲಿ ಭಕ್ತಸಾಗರವೇ ಹರಿದುಬಂದಿದೆ. ದೇವಿಗೆ ಮಹಾಲಕ್ಷ್ಮಿ ಅಲಂಕಾರ ಮಾಡಲಾಗಿದ್ದು, ಭಕ್ತರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ. ಸಚಿವರಾದ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸೇರಿದಂತೆ ಅನೇಕ ಗಣ್ಯರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ಮೈಸೂರು, ಆಗಸ್ಟ್ 7: ಮೈಸೂರಿನ ನಾಡದೇವಿ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಆಷಾಢ ಮಾಸದ ಕೊನೆಯ ಶುಕ್ರವಾರದಂದು ಭಕ್ತಸಾಗರವೇ ಹರಿದುಬಂದಿದೆ. ಆಷಾಢ ಶುಕ್ರವಾರಕ್ಕೆ ವಿಶೇಷ ಮಹತ್ವವಿರುವುದರಿಂದ, ಈ ದಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆಯುತ್ತಿದ್ದಾರೆ. ಚಾಮುಂಡೇಶ್ವರಿಗೆ ಮಹಾಲಕ್ಷ್ಮಿ ಅಲಂಕಾರವನ್ನು ಮಾಡಲಾಗಿದೆ. ದೇವಿಗೆ ಆಕಾಶ ನೀಲಿ ಬಣ್ಣದ ಸೀರೆಯನ್ನು ಹೊದಿಸಿ, ವಿವಿಧ ಬಗೆಯ ಹೂವುಗಳಿಂದ ಅಲಂಕರಿಸಲಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸೇರಿದಂತೆ ಹಲವು ರಾಜಕೀಯ ಗಣ್ಯರು, ಚಲನಚಿತ್ರ ನಟ-ನಟಿಯರು, ಮತ್ತು ಉದ್ಯಮಿಗಳು ಬೆಳ್ಳಂಬೆಳಗ್ಗೆಯೇ ಆಗಮಿಸಿ ದೇವಿಯ ದರ್ಶನ ಪಡೆದರು. ಸಾಮಾನ್ಯ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಸುಗಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲು ಪ್ರಾಧಿಕಾರವು ಕ್ರಮ ಕೈಗೊಂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us