Hassan: ಚಂದ್ರಗಿರಿ ಬೆಟ್ಟದಲ್ಲಿ ಎರಡು ಜೈನ ಬಸದಿಗಳ ನಡುವೆ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜೀಯವರ ಅಂತಿಮ ಸಂಸ್ಕಾರ

ಅರುಣ್​ ಕುಮಾರ್​ ಬೆಳ್ಳಿ

Updated on: Mar 23, 2023 | 7:17 PM

ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜೀಯವರ ಅಂತಿಮ ಸಂಸ್ಕಾರವನ್ನು ಜಿಲ್ಲೆಯ ಚಂದ್ರಗಿರಿ ಬೆಟ್ಟದಲ್ಲಿ ನಡೆಸಲು ಜಿಲ್ಲಾಡಳಿತ ತೀರ್ಮಾನಿಸಿದೆ,

ಹಾಸನ: ಗುರವಾರದಂದು ಹೃದಯಘಾತದಿಂದ ನಿಧನ ಹೊಂದಿ ಜೈನ ಧರ್ಮ ಸ್ವಾಮೀಜಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ (Sri Charukeerthi Bhattaraka Swamiji) ಅಂತಿಮ ಸಂಸ್ಕಾರವನ್ನು ಜಿಲ್ಲೆಯ ಚಂದ್ರಗಿರಿ ಬೆಟ್ಟದಲ್ಲಿ (Chandragiri Betta) ನಡೆಸಲು ಜಿಲ್ಲಾಡಳಿತ ತೀರ್ಮಾನಿಸಿದ್ದು ಅದಕ್ಕಾಗಿ ಸಿದ್ಧತೆ ನಡೆದಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಅಂತಿಮ ವಿಧಿವಧಾನಗಳನ್ನು ಜೈನ ಧರ್ಮದ (Jainism) ಪದ್ಧತಿಯಂತೆ ಅವರ ಶಿಷ್ಯವೃಂದ ಎರಡು ಜೈನ ಬಸದಿಗಳ ನಡುವೆ ನೆರವೇರಿಸುತ್ತದೆ. ಒಕ್ಕಲಿಗ ಸಮುದಾಯದ ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು ಮತ್ತು ಬೇರೆ ಬೇರೆ ಸಮುದಾಯಗಳ ಮಠಾಧೀಶರು, ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜೀಯವರ ನಿಧನಕ್ಕೆ ಅತೀವ ಸಂತಾಪ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Published on: Mar 23, 2023 07:17 PM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.