ಮುಂಬೈ ಮನೆಯಲ್ಲಿ ಲತಾ ಮಂಗೇಶ್ಕರ್ ಅಂತಿಮ ದರ್ಶನಕ್ಕೆ ವ್ಯವಸ್ಥೆ
ಲತಾ ಮಂಗೇಶ್ಕರ್ ಅವರ ಪಾರ್ಥಿವ ಶರೀರವನ್ನು ಅವರ ನಿವಾಸ ‘ಪ್ರಭು ಕುಂಜ್’ಗೆ ಕೊಂಡೊಯ್ಯಲಾಗಿದೆ. ಅಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (Lata Mangeshkar) ಅವರು ನಿಧನ ಭಾರತ ಚಿತ್ರರಂಗಕ್ಕೆ ತುಂಬಲಾರದ ನಷ್ಟ. ಅವರು ಇಂದು (ಫೆಬ್ರವರಿ 6) ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ ವಿಚಾರ ಕಾಡ್ಗಿಚ್ಚಿನಂತೆ ಹಬ್ಬಿದೆ. ಚಿತ್ರರಂಗ ಸೇರಿ ಬಹುತೇಕ ಎಲ್ಲಾ ಕ್ಷೇತ್ರದವರು ಲತಾ ಸಾವಿಗೆ ಕಂಬನಿ ಮಿಡಿಯುತ್ತಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಕೋರಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ಗಳನ್ನು ಹಾಕುತ್ತಿದ್ದಾರೆ. ಕೆಲವರು ಲತಾ ಕಂಠದಲ್ಲಿ ಮೂಡಿಬಂದ ಹಾಡಿನಲ್ಲಿ ತಮ್ಮಿಷ್ಟದ ಸಾಂಗ್ ಯಾವುದು ಎನ್ನುವ ಬಗ್ಗೆ ನೆನಪು ಮಾಡಿಕೊಳ್ಳುತ್ತಿದ್ದಾರೆ. ಲತಾ ಮಂಗೇಶ್ಕರ್ ಅವರ ಪಾರ್ಥಿವ ಶರೀರವನ್ನು ಅವರ ನಿವಾಸ ‘ಪ್ರಭು ಕುಂಜ್’ಗೆ ಕೊಂಡೊಯ್ಯಲಾಗಿದೆ. ಅಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆಯವರೆಗೆ ಅವರ ಪಾರ್ಥಿವ ಶರೀರ ನಿವಾಸದಲ್ಲೇ ಇರಲಿದೆ. ಇಂದು ಸಂಜೆ 6.30ಕ್ಕೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.
ಇದನ್ನೂ ಓದಿ: ‘ಲತಾ ಮಂಗೇಶ್ಕರ್ ಅವರ ಆ ಹಾಡು ಕೇಳಿದ್ರೆ ಈಗಲೂ ಕಣ್ಣೀರು ಬರುತ್ತೆ’: ಬಸವರಾಜ ಬೊಮ್ಮಾಯಿ