Lata Mangeshkar: ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ತುಸು ಚೇತರಿಕೆ; ವಕ್ತಾರರು ಹೇಳಿದ್ದೇನು?

| Updated By: shivaprasad.hs

Updated on: Jan 25, 2022 | 8:59 PM

Lata Mangeshkar Health Update: ಖ್ಯಾತ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡಿದೆ. ಈ ಕುರಿತು ಅವರ ವಕ್ತಾರರು ಮಾಹಿತಿ ನೀಡಿದ್ಧಾರೆ.

ಮುಂಬೈ: ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಿವುಡ್‌ ಗಾನ ಕೋಗಿಲೆ ಲತಾ ಮಂಗೇಶ್ಕರ್‌ ಆರೋಗ್ಯದಲ್ಲಿ ತುಸು ಚೇತರಿಕೆಯಾಗಿದೆ ಎಂದು ಅವರ ವಕ್ತಾರರು ತಿಳಿಸಿದ್ದಾರೆ. ಸ್ವತಃ ಲತಾ ಅವರ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಿರುವ ವಕ್ತಾರರು, ‘‘ಗಾಯಕಿ ಲತಾ ಇನ್ನೂ ಐಸಿಯುವಿನಲ್ಲಿದ್ದಾರೆ. ಅವರ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡಿದೆ’’ ಎಂದು ಮಾಹಿತಿ ನೀಡಿದ್ದಾರೆ. ಲತಾ ಅವರಿಗೆ ಈ ತಿಂಗಳ ಆರಂಭದಲ್ಲಿ ಕೊವಿಡ್ ಪಾಸಿಟಿವ್ ಆಗಿತ್ತು. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಡಾ.ಪ್ರತಿತ್ ಸಮ್ದಾನಿ ಲತಾ ಅವರ ಆರೋಗ್ಯದ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದಾರೆ.

ಲತಾ ಅವರ ಆರೋಗ್ಯದ ಕುರಿತು ಹಲವರು ವದಂತಿ ಹಬ್ಬಿಸುತ್ತಿದ್ದಾರೆ. ಅದಕ್ಕೆ ಕಿವಿಗೊಡಬೇಡಿ ಎಂದು ವಕ್ತಾರರು ಇದೇ ವೇಳೆ ತಿಳಿಸಿದ್ದಾರೆ. ಲತಾ ಅವರು ಶೀಘ್ರವಾಗಿ ಗುಣಮುಖರಾಗುವಂತೆ ದೇಶಾದ್ಯಂತ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಲತಾ ಅವರ ವಕ್ತಾರರು ಹಂಚಿಕೊಂಡಿರುವ ಟ್ವೀಟ್:

ಇದನ್ನೂ ಓದಿ:

Lata Mangeshkar: ಲತಾ ಮಂಗೇಶ್ಕರ್ ಆರೋಗ್ಯದ ಕುರಿತು ಮಾಹಿತಿ ನೀಡಿದ ವಕ್ತಾರರು; ವದಂತಿಗಳಿಗೆ ಕಿವಿಗೊಡದಂತೆ ಮನವಿ

Sonu Nigam: ಖ್ಯಾತ ಗಾಯಕ ಸೋನು ನಿಗಮ್​ ಸಾಧನೆಗೆ ಒಲಿಯಿತು ಪದ್ಮಶ್ರೀ ಪ್ರಶಸ್ತಿಯ ಗರಿ