ಗದಗ: ಗಣೇಶ ವಿಸರ್ಜನೆ ವೇಳೆ ಗಲಾಟೆ, ಲಾಠಿಚಾರ್ಜ್​​

ಗದಗ ನಗರದ ಟಾಂಗಾಕೂಟ್ ಸರ್ಕಲ್​ನಲ್ಲಿ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಗಲಾಟೆಯನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗದಗ: ಗಣೇಶ ವಿಸರ್ಜನೆ ವೇಳೆ ಗಲಾಟೆ, ಲಾಠಿಚಾರ್ಜ್​​
| Updated By: ವಿವೇಕ ಬಿರಾದಾರ

Updated on: Sep 16, 2024 | 12:41 PM

ಗದಗ, ಸೆಪ್ಟೆಂಬರ್ 16: ಗಣೇಶ ವಿಸರ್ಜನೆ ವೇಳೆ (Ganesha Procession) ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ಗದಗ (Gadag) ನಗರದ ಟಾಂಗಾಕೂಟ್ ಸರ್ಕಲ್​ನಲ್ಲಿ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ. ಗಲಾಟೆಯನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ (Police Lati charge) ಮಾಡಿದ್ದಾರೆ. ಪಟಾಕಿ ಹಚ್ಚುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ವಾಗ್ವಾದ ಆರಂಭವಾಗಿದೆ. ವಾಗ್ವಾದ ವಿಕೋಪಕ್ಕೆ ತಿರುಗಿ ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ, ತಿಳಿಗೊಳಿಸಲು ಯತ್ನಿಸಿದರು. ಆದರೆ, ಪರಿಸ್ಥಿತಿ ಕೈ ಮೀರಿದಾಗ ಪೊಲೀಸರು ಲಾಠಿ ಚಾರ್ಜ್ ಮಾಡಿದರು. ಲಾಠಿ ಚಾರ್ಜ್​ ಮಾಡುತ್ತಿದ್ದಂತೆ ಜನರು ದಿಕ್ಕಾಪಾಲಾಗಿ ಓಡಿದರು. ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us