ಎತ್ತಿಹೊಳೆ ಮೊದಲ ಹಂತದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರದ ವಿತರಣಾ ತೊಟ್ಟಿ 3ರಲ್ಲಿ ನೀರೆತ್ತುವ ಪಂಪ್ ಹಾಗೂ ಮೋಟಾರ್ಗಳನ್ನು ಆನ್ ಮಾಡುವ ಮೂಲಕ ಯೋಜನೆಯ ಮೊದಲ ಹಂತವನ್ನು ಲೋಕಾರ್ಪಣೆಗೊಳಿಸಿದ್ದಾರೆ.
ಬಹು ನಿರೀಕ್ಷಿತ ಎತ್ತಿನಹೊಳೆ ಯೋಜನೆಯ ಮೊದಲ ಹಂತ ಇಂದು ಶುಕ್ರವಾರ (ಸೆ.06) ಲೋಕಾರ್ಪಣೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರದ ವಿತರಣಾ ತೊಟ್ಟಿ 3ರಲ್ಲಿ ನೀರೆತ್ತುವ ಪಂಪ್ ಹಾಗೂ ಮೋಟಾರ್ಗಳನ್ನು ಆನ್ ಮಾಡುವ ಮೂಲಕ ಯೋಜನೆಯ ಮೊದಲ ಹಂತವನ್ನು ಲೋಕಾರ್ಪಣೆಗೊಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾಥ್ ನೀಡಿದರು. ಅಲ್ಲದೇ ಇದೇ ವೇಳೆ ಏಳು ಸಚಿವರಿಂದ ದೊಡ್ಡನಗರದಲ್ಲೇ ನೀರನ್ನೆತ್ತುವ ಏಳು ವಿಯರ್ಗಳಿಗೂ ಚಾಲನೆ ನೀಡಲಾಗಿಯಿತು.
ಇಂದು ಬೆಳಗ್ಗೆ 8.30ರಿಂದ ಉದ್ಘಾಟನಾ ಸ್ಥಳದಲ್ಲಿ ಹೋಮ ಹವನ ನೆರವೇರಿತು. ಕಾರ್ಯಕ್ರಮದ ಉಸ್ತುವಾರಿಯನ್ನು ಜಲಸಂಪನ್ಮೂಲ ಇಲಾಖೆ ಸಚಿವ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೊಂದಿದ್ದಾರೆ.
7 ವಿಯರ್ಗಳ ಮೂಲಕ ಪಂಪ್ ಮಾಡಿದ್ದ ನೀರಿಗೆ ಹೆಬ್ಬನಹಳ್ಳಿಯ ವಿತರಣಾ ತೊಟ್ಟಿ 4ರಲ್ಲಿ ಬಾಗಿನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಬಾಗಿನ ಅಪರ್ಪಿಸಲಿದ್ದಾರೆ. ಬಾಗಿನ ಅರ್ಪಣೆ ಸಮೀಪವೇ ಬೃಹತ್ ಬಹಿರಂಗ ಸಮಾವೇಶ ಆಯೋಜನೆ ಮಾಡಲಾಗಿದೆ. ಹೆಬ್ಬನಹಳ್ಳಿಯಲ್ಲಿ ಮಧ್ಯಾಹ್ನ 1 ಗಂಟೆಗೆ ಸಮಾರಂಭ ಆರಂಭವಾಗಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:08 pm, Fri, 6 September 24