ಟಿ20 ಕ್ರಿಕೆಟ್ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
Laura Harris Records: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕ್ಯಾಂಟರ್ಬರಿ ಮಹಿಳಾ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 145 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಒಟಾಗೊ ಮಹಿಳಾ ತಂಡದ ಪರ 17 ಎಸೆತಗಳನ್ನು ಎದುರಿಸಿದ ಲಾರಾ ಹ್ಯಾರಿಸ್ 4 ಭರ್ಜರಿ ಸಿಕ್ಸರ್ ಹಾಗೂ 6 ಫೋರ್ಗಳೊಂದಿಗೆ 52 ರನ್ ಸಿಡಿಸಿದರು.
ಮಹಿಳಾ ಟಿ20 ಕ್ರಿಕೆಟ್ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಲಾರಾ ಹ್ಯಾರಿಸ್ ಪಾಲಾಗಿದೆ. ನ್ಯೂಝಿಲೆಂಡ್ನಲ್ಲಿ ನಡೆಯುತ್ತಿರುವ ಸೂಪರ್ ಸ್ಮ್ಯಾಶ್ ಮಹಿಳಾ ಟಿ20 ಟೂರ್ನಿಯಲ್ಲಿ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಲಾರಾ ಈ ದಾಖಲೆ ಬರೆದಿದ್ದಾರೆ.
ಇದಕ್ಕೂ ಮುನ್ನ ಈ ದಾಖಲೆ ಮೇರಿ ಕೆಲ್ಲಿ ಹೆಸರಿನಲ್ಲಿತ್ತು. 2022 ರಲ್ಲಿ ಗ್ಲೌಸೆಸ್ಟರ್‌ಶೈರ್ ವಿರುದ್ಧದ ಪಂದ್ಯದಲ್ಲಿ ವಾರ್ವಿಕ್‌ಷೈರ್ ಪರ ಕಣಕ್ಕಿಳಿದಿದ್ದ ಕೇವಲ 15 ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಸರಿಗಟ್ಟುವ ಮೂಲಕ ಆಸ್ಟ್ರೇಲಿಯನ್ ಆಟಗಾರ್ತಿ ಲಾರಾ ಹ್ಯಾರಿಸ್ ಅಗ್ರಸ್ಥಾನಕ್ಕೇರಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕ್ಯಾಂಟರ್ಬರಿ ಮಹಿಳಾ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 145 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಒಟಾಗೊ ಮಹಿಳಾ ತಂಡದ ಪರ 17 ಎಸೆತಗಳನ್ನು ಎದುರಿಸಿದ ಲಾರಾ ಹ್ಯಾರಿಸ್ 4 ಭರ್ಜರಿ ಸಿಕ್ಸರ್ ಹಾಗೂ 6 ಫೋರ್ಗಳೊಂದಿಗೆ 52 ರನ್ ಸಿಡಿಸಿದರು.
ಈ ಸ್ಫೋಟಕ ಅರ್ಧಶತಕದ ನೆರವಿನೊಂದಿಗೆ ಮೂಲಕ ಒಟಾಗೊ ಮಹಿಳಾ ತಂಡ 14.5 ಓವರ್ಗಳಲ್ಲಿ 146 ರನ್ ಬಾರಿಸಿ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.

