ಬಿಜೆಪಿ ನಾಯಕಿ ಮಾಧವಿ ಲತಾಗೆ ಬಾಗಲಕೋಟೆ ಪ್ರವೇಶ ನಿಷೇಧ: ಅಕ್ಟೋಬರ್ 23ರವರೆಗೆ ನಿರ್ಬಂಧ

Edited By:

Updated on: Sep 25, 2026 | 7:46 AM

ಹೈದರಾಬಾದ್ ಬಿಜೆಪಿ ನಾಯಕಿ ಮಾಧವಿ ಲತಾ ಅವರಿಗೆ ಬಾಗಲಕೋಟೆ ಜಿಲ್ಲಾಡಳಿತ ಒಂದು ತಿಂಗಳ ಕಾಲ ಪ್ರವೇಶ ನಿಷೇಧಿಸಿದೆ. ಗಣೇಶ ವಿಸರ್ಜನಾ ಕಾರ್ಯಕ್ರಮಕ್ಕೆ ಅವರಿಗೆ ಆಹ್ವಾನವಿದ್ದ ಹಿನ್ನೆಲೆ, ಮಾಧವಿ ಲತಾ ಅವರ ಪ್ರಚೋದನಕಾರಿ ಭಾಷಣಗಳಿಂದ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಇರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ಸಂಗಪ್ಪ ಈ ಬಗ್ಗೆ ಆದೇಶಿಸಿದ್ದಾರೆ. ಜಿಲ್ಲಾಡಳಿತದ ಈ ನಡೆ ಹಿಂದೂ ಕಾರ್ಯಕರ್ತರಿಂದ ಆಕ್ರೋಶಕ್ಕೆ ಕಾರಣವಾಗಿದೆ.

ಬಾಗಲಕೋಟೆ, ಸೆಪ್ಟೆಂಬರ್​​ 25: ಬಿಜೆಪಿ ನಾಯಕಿ ಕೊಂಪೆಲ್ಲಾ ಮಾಧವಿಲತಾರಿಗೆ ಅಕ್ಟೋಬರ್​ 23ರವರೆಗೆ ಬಾಗಲಕೋಟೆ ಜಿಲ್ಲೆಗೆ ಪ್ರವೇಶ ನಿಷೇಧಿಸಿ ಡಿಸಿ ಸಂಗಪ್ಪ ಆದೇಶಿಸಿದ್ದಾರೆ. ಹಿಂದೂಮಹಾಗಣಪತಿ ವಿಸರ್ಜನಾ ಕಾರ್ಯಕ್ರಮಕ್ಕೆ ಮುಖ್ಯ ಭಾಷಣಕಾರರಾಗಿ ಅವರನ್ನು ಆಹ್ವಾನಿಸಲಾಗಿತ್ತು. ಆದರೆ ಪ್ರಚೋದನಾಕಾರಿ ಭಾಷಣ ಸಾಧ್ಯತೆ ಹಿನ್ನೆಲೆ ಎಸ್​ಪಿ ಸಿದ್ದಾರ್ಥ್ ಗೋಯೆಲ್ ಪತ್ರದ ಮೇರೆಗೆ ಮಾಧವಿಲತಾರಿಗೆ ನಿರ್ಬಂಧವಿಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಪ್ರವೇಶ ನಿಷೇಧ ಬಗ್ಗೆ ಮಾಧವಿಲತಾರಿಗೂ ಇ-ಮೇಲ್ ಮೂಲಕ ಪೊಲೀಸರು ಮಾಹಿತಿ ರವಾನಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Sep 25, 2026 07:45 AM
Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More