Loading video

ಸದನದ ಕಲಾಪಗಳಲ್ಲಿ ನಮ್ಮ ಹಾಜರಾತಿಯನ್ನು ಹೆಚ್ಚಿಸಿ ಸರ್ಕಾರದ ತಪ್ಪುಗಳನ್ನು ಎತ್ತಿ ತೋರುತ್ತೇವೆ: ಆರ್ ಅಶೋಕ

|

Updated on: Mar 03, 2025 | 10:42 PM

ಸರ್ಕಾರದ ಭಾನಗಡಿ ಬಹಳ ಇವೆ, ಎಸ್​ಸಿ ಮತ್ತು ಎಸ್​ಟಿ ಸಮುದಾಯಗಳಿಗೆ ಮೀಸಲಿಟ್ಟಿದ್ದ ಹಣವನ್ನು ದುರ್ಬಳಕೆ ಮಾಡಲಾಗಿದೆ, ಒಂಭತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚಬೇಕೆನ್ನುವ ಸರ್ಕಾರದ ನಿರ್ಧಾರ ದಿಗಿಲು ಮೂಡಿಸುವಂಥದ್ದು, ಹಿಂದೂಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಲ್ಲೆ ಸೇರಿದಂತೆ ಹತ್ತು ಹಲವು ವಿಷಯಗಳನ್ನು ಸದನದಲ್ಲಿ ಎತ್ತಲಾಗುವುದು ಎಂದು ಅಶೋಕ ಹೇಳಿದರು.

ಬೆಂಗಳೂರು: ಶಾಸಕಾಂಗ ಸಭೆಯನ್ನು (legislative party meeting) ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತಾಡಿದ ವಿರೋಧ ಪಕ್ಷದ ನಾಯಕ ಅರ್ ಅಶೋಕ, ಬಜೆಟ್ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ತಪ್ಪಗಳನ್ನು ಸದನದಲ್ಲಿ ಎತ್ತಿ ತೋರಿಸಿ ಬಿಸಿ ಮುಟ್ಟಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಹೇಳಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ, ಮೈಕ್ರೋ ಫೈನಾನ್ಸ್ ಗಳ ಮೇಲೆ ನಿಯಂತ್ರಣ ಸಾಧಿಸಲಾಗುತ್ತಿಲ್ಲ, ಹಸುಗಳ ಕೆಚ್ಚಲು ಕೊಯ್ದ ಘಟನೆ, ಬ್ಯಾಂಕ್ ದರೋಡೆ ನಡೆಸಿದವರರಲ್ಲಿ ಕೆಲವರು ಮಾತ್ರ ಸಿಕ್ಕಿದ್ದಾರೆ, ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮೊದಲಾದ ಎಲ್ಲ ಸಂಗತಿಗಳನ್ನು ಸದನದಲ್ಲಿ ಪ್ರಸ್ತಾಪಿಸಿ ಸರ್ಕಾರದಿಂದ ಜವಾಬು ಕೇಳಲಾಗುವುದು ಎಂದು ವಿಪಕ್ಷ ನಾಯಕ ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಕಲಾವಿದರು ಯಾರ ಸ್ವತ್ತೂ ಅಲ್ಲ: ಡಿಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ್​ ವಾಗ್ದಾಳಿ