AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನಮ್ಮನ ಮೇಲೆ ಆಸಿಡ್‌ ದಾಳಿ: ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ

ಚೆನ್ನಮ್ಮನ ಮೇಲೆ ಆಸಿಡ್‌ ದಾಳಿ: ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ

ಹರೀಶ್ ಜಿ.ಆರ್​.
| Edited By: |

Updated on:Jul 18, 2026 | 9:11 PM

Share

2001ರಲ್ಲಿ ಚೆನ್ನಮ್ಮ ಅವರ ಮೇಲೆ ಆ್ಯಸಿಡ್ ದಾಳಿಯಾಗಿತ್ತು. ಹರದನಹಳ್ಳಿಯಲ್ಲಿ ದೇವಾಲಯದಲ್ಲಿ ಪೂಜೆ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಅವರ ಮೇಲೆ ಆ್ಯಸಿಡ್ ದಾಳಿಯಾಗಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದರು. ಆಸ್ತಿ ವಿವಾದ ಹಾಗೂ ಕುಟುಂಬದ ವೈಷಮ್ಯವೇ ಈ ದಾಳಿಗೆ ಕಾರಣವಾಗಿತ್ತು. ದೇವೇಗೌಡರ ಸಂಬಂಧಿ ಲೋಕೇಶ್ (ಬಸವೇಗೌಡರ ಮಗ) ಎಂಬಾತನೇ ಈ ಕೃತ್ಯದ ಪ್ರಮುಖ ಆರೋಪಿಯಾಗಿದ್ದ. ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ನಡೆದಿದ್ದ ಈ ಘಟನೆ ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿತ್ತು. ಇನ್ನು ಚೆನ್ನಮ್ಮನವರಿಗೆ ಆಸಿಡ್ ಅಟ್ಯಾಕ್ ಆದಾಗ ಅವರ ಪರವಾಗಿ ವಾದಿಸಿದ ಹಿರಿಯ ವಕೀಲ ಚಂದ್ರಮೌಳಿಯವರು ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಬೆಂಗಳೂರು, (ಜುಲೈ 18): ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಇಂದು (ಜುಲೈ 18) ವಿಧಿವಶರಾಗಿದ್ದಾರೆ. ಇನ್ನು 2001ರಲ್ಲಿ ಚೆನ್ನಮ್ಮ ಅವರ ಮೇಲೆ ಆ್ಯಸಿಡ್ ದಾಳಿಯಾಗಿತ್ತು. ಹರದನಹಳ್ಳಿಯಲ್ಲಿ ದೇವಾಲಯದಲ್ಲಿ ಪೂಜೆ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಅವರ ಮೇಲೆ ಆ್ಯಸಿಡ್ ದಾಳಿಯಾಗಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದರು.

ಆಸ್ತಿ ವಿವಾದ ಹಾಗೂ ಕುಟುಂಬದ ವೈಷಮ್ಯವೇ ಈ ದಾಳಿಗೆ ಕಾರಣವಾಗಿತ್ತು. ದೇವೇಗೌಡರ ಸಂಬಂಧಿ ಲೋಕೇಶ್ (ಬಸವೇಗೌಡರ ಮಗ) ಎಂಬಾತನೇ ಈ ಕೃತ್ಯದ ಪ್ರಮುಖ ಆರೋಪಿಯಾಗಿದ್ದ. ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ನಡೆದಿದ್ದ ಈ ಘಟನೆ ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿತ್ತು. ಇನ್ನು ಚೆನ್ನಮ್ಮನವರಿಗೆ ಆಸಿಡ್ ಅಟ್ಯಾಕ್ ಆದಾಗ ಅವರ ಪರವಾಗಿ ವಾದಿಸಿದ ಹಿರಿಯ ವಕೀಲ ಚಂದ್ರಮೌಳಿಯವರು ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಇದನ್ನೂ ನೋಡಿ: ದೇವೇಗೌಡರ ಪತ್ನಿ ಚೆನ್ನಮ್ಮನ ಮೇಲೆ ಆ್ಯಸಿಡ್ ದಾಳಿ ಎಲ್ಲಿ-ಯಾವಾಗ ಆಗಿತ್ತು ಗೊತ್ತಾ?

Published on: Jul 18, 2026 09:08 PM

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More