AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ಲ ಎಂಬ ಆರೋಪಕ್ಕೆ ಲಾಯರ್ ಪ್ರತಿಕ್ರಿಯೆ

ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ಲ ಎಂಬ ಆರೋಪಕ್ಕೆ ಲಾಯರ್ ಪ್ರತಿಕ್ರಿಯೆ

ಮಾಲತೇಶ ಜಗ್ಗೀನ್
| Edited By: |

Updated on: Oct 25, 2026 | 11:25 AM

Share

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಅವರು ಹೊರಗೆ ಬರುವುದು ಸ್ವತಃ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಇಷ್ಟ ಇಲ್ಲ ಎಂದು ಕೆಲವರು ಆರೋಪ ಮಾಡುತ್ತಿದ್ದಾರೆ. ಅಂಥವರ ಮಾತುಗಳಿಗೆ ದರ್ಶನ್ ಪರ ವಕೀಲರಾದ ಮೊಹಮ್ಮದ್ ಮುಬಾರಕ್ ಅವರು ತಿರುಗೇಟು ನೀಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಅವರು ಹೊರಗೆ ಬರುವುದು ಸ್ವತಃ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಇಷ್ಟ ಇಲ್ಲ ಎಂದು ಕೆಲವರು ಆರೋಪ ಮಾಡುತ್ತಿದ್ದಾರೆ. ಅಂಥವರ ಮಾತುಗಳಿಗೆ ದರ್ಶನ್ ಪರ ವಕೀಲರಾದ ಮೊಹಮ್ಮದ್ ಮುಬಾರಕ್ ಅವರು ತಿರುಗೇಟು ನೀಡಿದ್ದಾರೆ. ‘ವಿಜಯಲಕ್ಷ್ಮಿ ಅವರು ದರ್ಶನ್ ಅವರ ಧರ್ಮಪತ್ನಿ. ಅವರಿಗೆ ಇಲ್ಲದೆ ಇರುವ ನೋವು ಬೇರೆಯವರಿಗೆ ಇರಲು ಸಾಧ್ಯವೇ? ಅವರ ಕುಟುಂಬ ಎಷ್ಟು ಕಷ್ಟಪಡುತ್ತಿದೆ ಎಂಬುದು ನಮಗೆ ಮಾತ್ರ ಗೊತ್ತಿದೆ. ವಿಜಯಲಕ್ಷ್ಮಿ ಅವರು ಪಡುತ್ತಿರುವ ಕಷ್ಟಕ್ಕೆ ನಾನೇ ಸಾಕ್ಷಿ. ಈ ಕೇಸ್​ಗೆ ಸಂಬಂಧಿಸಿದಂತೆ ಮಧ್ಯರಾತ್ರಿ ಕರೆ ಮಾಡಿದರೂ ಕೂಡ ಅವರು ಮಾತನಾಡುತ್ತಾರೆ. ನಮ್ಮ ಕಚೇರಿಯಲ್ಲಿ 4-5 ಗಂಟೆಗಳ ಕಾಲ ಅವರು ಕುಳಿತಿದ್ದಾರೆ. ದರ್ಶನ್ ಅವರನ್ನು ಹೊರಗೆ ಕರೆತರುವ ಉದ್ದೇಶ ಅವರಿಗೆ ಇಲ್ಲ ಎಂದಾಗಿದ್ದರೆ ಅವರು ಇಷ್ಟು ಕಷ್ಟಪಡುತ್ತಿದ್ದರಾ?’ ಎಂದು ವಕೀಲರಾದ ಮೊಹಮ್ಮದ್ ಮುಬಾರಕ್ ಅವರು ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಾಲತೇಶ ಜಗ್ಗೀನ್
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More