AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಂಡರ್​​ ಸಮಸ್ಯೆ: ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!

ಸಿಲಿಂಡರ್​​ ಸಮಸ್ಯೆ: ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Apr 03, 2026 | 4:52 PM

Share

ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಅವರು ಸಿಲಿಂಡರ್ ಮತ್ತು ಎಲ್‌ಪಿಜಿ ಕೊರತೆಯ ಕುರಿತು ಹಿರಿಯ ಸಚಿವ ಕೆ.ಎಚ್. ಮುನಿಯಪ್ಪ ಅವರ ಹೇಳಿಕೆಗಳನ್ನು ಟೀಕಿಸಿದ್ದಾರೆ. ಕೇಂದ್ರ ಸರ್ಕಾರವನ್ನು ಓಲೈಸುವ ಬದಲು, ಬಿಕ್ಕಟ್ಟಿಗೆ ಕೇಂದ್ರವೇ ನೇರ ಹೊಣೆ ಎಂದು ಸ್ಪಷ್ಟಪಡಿಸುವಂತೆ ಮುನಿಯಪ್ಪ ಅವರಿಗೆ ಲಕ್ಷ್ಮಣ್ ಮನವಿ ಮಾಡಿದ್ದಾರೆ. ಇದು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದಿಲ್ಲ ಎಂದು ಅವರು ಒತ್ತಿಹೇಳಿದ್ದಾರೆ.

ದಾವಣಗೆರೆ, ಏಪ್ರಿಲ್​​ 03: ರಾಜ್ಯದಲ್ಲಿ ಸಿಲಿಂಡರ್, ಆಟೋ ಗ್ಯಾಸ್​​ಗೆ ತೀವ್ರ ತೊಂದರೆ ವಿಚಾರವಾಗಿ ಸಚಿವ K.H. ಮುನಿಯಪ್ಪ ವಿರುದ್ಧ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್​ ವಾಗ್ದಾಳಿ ನಡೆಸಿದ್ದಾರೆ. ಅದು ಕೇಂದ್ರದ ಸಮಸ್ಯೆ, ಅಗತ್ಯಕ್ಕೆ ತಕ್ಕಂತೆ ಪೂರೈಸುತ್ತಿಲ್ಲ. ಹೀಗಿರುವಾಗ ಕೇಂದ್ರದವರು ಪೂರೈಸುತ್ತಿಲ್ಲ ಎಂದು ಹೇಳುವುದನ್ನು ಬಿಟ್ಟು, ಸಚಿವರು ಕೇಂದ್ರ ಸರ್ಕಾರದ ಓಲೈಕೆ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಲಕ್ಷ್ಮಣ್​​ ಆರೋಪಿಸಿದ್ದಾರೆ. ಆಟೋ ಚಾಲಕರು ಬಂಕ್​ಗಳಲ್ಲಿಯೇ ಮಲಗುತ್ತಿದ್ದು, ಅವರೆಲ್ಲ ರಾಜ್ಯ ಸರ್ಕಾರವೇ ಸಿಲಿಂಡರ್ ಪೂರೈಸ್ತಿದೆ ಎಂದು ತಿಳಿದಿದ್ದಾರೆ. ಹೀಗಾಗಿ ಹಿರಿಯ ಸಚಿವ, ಏಳು ಸಲ ಸಂಸದರಾಗಿದ್ದ ಮುನಿಯಪ್ಪ ಅವರು ಬಾಯಿ ಮುಚ್ಚಿಕೊಂಡು ಇದ್ದರೆ ಚಂದ. ನಾನು ದಯಮಾಡಿ ಕೈಮುಗಿದು ಬೇಡಿಕೊಳ್ಳುವೆ, ಪದೇಪದೆ ಸಭೆ ಮಾಡುವುದು ನಿಲ್ಲಿಸಿ ಎಂದು ಲಕ್ಷ್ಮಣ್​​ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More