ಲಕ್ಷ್ಮಣ ಸವದಿ ಯಾವ ಕಾರಣಕ್ಕೂ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಲ್ಲ: ಲಕ್ಷ್ಮಿ ಹೆಬ್ಬಾಳ್ಕರ್, ಸಚಿವೆ

|

Updated on: Feb 05, 2024 | 4:29 PM

ಬೆಳಗಾವಿ ಭಾಗದಲ್ಲಿ ಮಾಜಿ ಸಚಿವ ಮತ್ತು ಬಿಜೆಪಿಯ ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಪ್ರಭಾವ ಕಡಿಮೆ ಮಾಡಲು ಕಾಂಗ್ರೆಸ್ ನಾಯಕರು ಸವದಿಯನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದರು. ಸವದಿಯವರು, ಪಕ್ಷದಲ್ಲೇ ಉಳಿಯುತ್ತಾರೆ, ಅವರನ್ನು ವಾಪಸ್ಸು ಕರೆದೊಯ್ಯಲು ಬಿಜೆಪಿ ನಾಯಕರು ಪ್ರಯತ್ನಿಸುತ್ತಿರುವುದು ತಮ್ಮ ಗಮನಕ್ಕಂತೂ ಬಂದಿಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಬೆಳಗಾವಿ: ಕಾಂಗ್ರೆಸ್ ಪಕ್ಷದಿಂದ ಜಗದೀಶ್ ಶೆಟ್ಟರ್ (Jagadish Shettar) ವಿಕೆಟ್ ಪತನಗೊಂಡ ಬಳಿಕ ಬಿಜೆಪಿ ನಾಯಕರ ಕಣ್ಣು ನೆಲಕಚ್ಚಿ ಆಡುವ ಬ್ಯಾಟರ್ ನ ಹಾಗೆ ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿದಿರುವ ಮತ್ತೊಬ್ಬ ವಲಸಿಗ ಮತ್ತು ಅಥಣಿ ಶಾಸಕ ಲಕ್ಷ್ಮಣ ಸವದಿ ಮೇಲಿದೆ. ಕಾಂಗ್ರೆಸ್ ನಾಯಕರು ಹೇಳುವ ಹಾಗೆ, ಬಿಜೆಪಿ ನಾಯಕರ ಯಾರ್ಕರ್, ಬೌನ್ಸರ್ ಗಳನ್ನು ಸವದಿ ಸಮರ್ಥವಾಗಿ ಎದುರಿಸುತ್ತಿದ್ದಾರೆ. ಆದರೆ, ಬಿಜೆಪಿ ನಾಯಕರ ಪ್ರಯತ್ನಗಳಂತೂ ಮುಂದುವರಿದಿವೆ. ಇಂದು ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು, ಸವದಿಯವರು ಕಾಂಗ್ರೆಸ್ ತೊರೆಯುವುದಿಲ್ಲ ಎಂದು ಆತ್ಮವಿಶ್ವಾಸದಿಂದ ಹೇಳಿದರು. ನಿಮಗೆ ನೆನಪಿರಬಹುದು, ವಿಧಾನ ಸಭಾ ಚುನಾವಣೆಗೆ ಮೊದಲು ಲಕ್ಷ್ಮಣ ಸವದಿಯವರನ್ನು ಬಿಜೆಪಿಯಿಂದ ಕಾಂಗ್ರೆಸ್ ಗೆ ತರುವಲ್ಲಿ ಲಕ್ಷ್ಮಿ ನಿರ್ಣಾಯಕ ಪಾತ್ರವಹಿಸಿದ್ದರು. ಬೆಳಗಾವಿ ಭಾಗದಲ್ಲಿ ಮಾಜಿ ಸಚಿವ ಮತ್ತು ಬಿಜೆಪಿಯ ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಪ್ರಭಾವ ಕಡಿಮೆ ಮಾಡಲು ಕಾಂಗ್ರೆಸ್ ನಾಯಕರು ಸವದಿಯನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದರು. ಸವದಿಯವರು, ಪಕ್ಷದಲ್ಲೇ ಉಳಿಯುತ್ತಾರೆ, ಅವರನ್ನು ವಾಪಸ್ಸು ಕರೆದೊಯ್ಯಲು ಬಿಜೆಪಿ ನಾಯಕರು ಪ್ರಯತ್ನಿಸುತ್ತಿರುವುದು ತಮ್ಮ ಗಮನಕ್ಕಂತೂ ಬಂದಿಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:25 pm, Mon, 5 February 24

Follow us on