ಪಿಎಸ್ಐ ಅಮಾನತ್ತಿಗೆ ಆಗ್ರಹಿಸಿ ಲಕ್ಷ್ಮೇಶ್ವರ ಬಂದ್, ಶ್ರೀರಾಮಸೇನೆ, ಗೋಸಾವಿ ಸಮಾಜದ ಪ್ರತಿಭಟನೆ!

|

Updated on: Oct 19, 2024 | 11:38 AM

ಪೊಲೀಸ್ ಇನ್ಸ್​ಪೆಕ್ಟರ್ ಈರಪ್ಪ ರಿತ್ತಿ ವಿನಾಕಾರಣ ಗೋಸಾವಿ ಸಮಾಜದ ಯುವಕರ ಮೇಲೆ ಹಲ್ಲೆ ನಡೆಸಿದ್ದಾರೆ, ಅವರನ್ನು ಕೂಡಲೇ ಅಮಾನತ್ತು ಮಾಡಬೇಕೆಂದು ಶ್ರೀರಾಮಸೇನೆ ಹೇಳಿಕೆಯೊಂದನ್ನು ನೀಡಿದೆ. ವ್ಯಾಪಾರಸ್ಥರು ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿರುವರೆಂದು ನಮ್ಮ ವರದಿಗಾರ ಹೇಳುತ್ತಾರೆ.

ಗದಗ: ಅಕ್ಟೋಬರ್ 12 ರಂದು ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ದಸರಾ ಮೆರವಣಿಗೆ ಸಾಗುತ್ತಿದ್ದಾಗ ಎರಡು ಗುಂಪುಗಳ ನಡುವೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್​ಪೆಕ್ಟರ್ ಈರಪ್ಪ ರಿತ್ತಿ ಎನ್ನುವವರು ಏಕಪಕ್ಷೀಯ ಧೋರಣೆ ತಳೆದು ಗೋಸಾವಿ ಸಮುದಾಯದ ಯುವಕರ ಮೇಲೆ ಹಲ್ಲೆ ನಡೆಸಿದನ್ನು ಖಂಡಿಸಿ ಶ್ರೀರಾಮ ಸೇನೆ ಮತ್ತು ಗೋಸಾವಿ ಸಮಾಜ ನೀಡಿದ ಬಂದ್ ಕರೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಪಟ್ಟಣದ ಮುಖ್ಯ ಮಾರ್ಕೆಟ್​ ನಲ್ಲಿ ಅಂಗಡಿಗಳೆಲ್ಲ ಬಂದ್ ಆಗಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಚಿಕ್ಕೋಡಿ: ದುರ್ಗಾದೇವಿ ಮೂರ್ತಿ ವಿಸರ್ಜನೆ ಬಳಿಕ ಎರಡು ಕೋಮಿನ ನಡುವೆ ಗಲಾಟೆ, ಲಾಠಿ ಚಾರ್ಜ್​​

Follow us on