ಖಾಸಗಿ ಕಾರ್ಯಕ್ರಮಕ್ಕೆ ಪಾಲಿಕೆ ಆವರಣ ಬಳಸಿಕೊಂಡ ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿರೋಧ ಪಕ್ಷದ ನಾಯಕ ದೊರೈರಾಜ ಮಣಿಕುಂಟ್ಲ

ಖಾಸಗಿ ಕಾರ್ಯಕ್ರಮಕ್ಕೆ ಪಾಲಿಕೆ ಆವರಣ ಬಳಸಿಕೊಂಡ ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿರೋಧ ಪಕ್ಷದ ನಾಯಕ ದೊರೈರಾಜ ಮಣಿಕುಂಟ್ಲ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on:Nov 29, 2022 | 3:05 PM

ಔತಣಕೂಟಕ್ಕಾಗಿ ಎರಡೂವರೆ ಕ್ವಿಂಟಾಲ್ ಮಟನ್ ಬಿರಿಯಾನಿ ಮತ್ತು 50 ಕೆಜಿ ಚಿಕನ್ ಕಬಾಬ್ ಮಾಡಿಸಲಾಗಿದೆ. ಖಾಸಗಿ ಕಾರ್ಯಕ್ರಮಕ್ಕೆ ನಗರಪಾಲಿಕೆಯ ಆವರಣ ಉಪಯೋಗಿಸಿರುವುದು ಸಾರ್ವಜನಿಕರಲ್ಲಿ ಅಸಮಾಧಾನ ಮೂಡಿಸಿದೆ.

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆ (Hubballi-Dharwad Palike) ಆವರಣವನ್ನು ಖಾಸಗಿ ಕಾರ್ಯಕ್ರಮಗಳಿಗೆ ಉಪಯೋಗಿಸಬಹುದು ಮಾರಾಯ್ರೇ. ಇಲ್ನೋಡಿ, ಪಾಲಿಕೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ದೊರೈರಾಜ ಮಣಿಕುಂಟ್ಲ (Dorairaj Manikuntla) ತನ್ನ ಹೊಸ ಕಚೇರಿ ಉದ್ಘಾಟನೆಗೆ ಭರ್ಜರಿ ಬಾಡೂಟ (non veg feast) ತಯಾರು ಮಾಡಿಸಿದ್ದಾರೆ. ನಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಔತಣಕೂಟಕ್ಕಾಗಿ ಎರಡೂವರೆ ಕ್ವಿಂಟಾಲ್ ಮಟನ್ ಬಿರಿಯಾನಿ ಮತ್ತು 50 ಕೆಜಿ ಚಿಕನ್ ಕಬಾಬ್ ಮಾಡಿಸಲಾಗಿದೆ. ಖಾಸಗಿ ಕಾರ್ಯಕ್ರಮಕ್ಕೆ ನಗರಪಾಲಿಕೆಯ ಆವರಣ ಉಪಯೋಗಿಸಿರುವುದು ಸಾರ್ವಜನಿಕರಲ್ಲಿ ಅಸಮಾಧಾನ ಮೂಡಿಸಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Nov 29, 2022 03:04 PM