ಪೋನ್ ಟ್ಯಾಪ್ ಆಗುತ್ತಿದೆಯೆಂದು ವಿಪಕ್ಷ ನಾಯಕ ಅಶೋಕ ಇದುವರೆಗೆ ದೂರು ದಾಖಲಿಸಿಲ್ಲ: ಪರಮೇಶ್ವರ್
ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಡೈರೆಕ್ಟೋರೇಟ್ ಆಫ್ ರೆವಿನ್ಯೂ ಇಂಟಲಿಜೆನ್ಸ್ ಅಧಿಕಾರಿಗಳು ಗೃಹ ಇಲಾಖೆಗೆ ಯಾವುದೇ ವರದಿ ಸಲ್ಲಿಸಿಲ್ಲ, ಒಂದು ವಾರದಲ್ಲಿ ವರದಿ ಸಲ್ಲಿಸುವುದಾಗಿ ಅವರು ರನ್ಯಾ ಕಸ್ಟಡಿ ಪಡೆದಿದ್ದರು, ಒಂದು ತಾತ್ಕಾಲಿಕ ವರದಿಯನ್ನು ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲಿಸಿರುವ ಸಾಧ್ಯತೆ ಇದೆ, ತಮ್ಮ ಇಲಾಖೆಗಂತೂ ಸಲ್ಲಿಸಿಲ್ಲವೆಂದು ಪರಮೇಶ್ವರ್ ಹೇಳಿದರು.
ಬೆಂಗಳೂರು, 25 ಮಾರ್ಚ್: ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗೃಹ ಮಂತ್ರಿ ಜಿ ಪರಮೇಶ್ವರ್, ವಿರೋಧ ಪಕ್ಷದ ನಾಯಕ ಆರ್ ಅಶೋಕ (R Ashoka) ತಮ್ಮ ಫೋನ್ ಟ್ಯಾಪ್ ಅಗುತ್ತಿರುವ ಬಗ್ಗೆ ದೂರಿರುವುದನ್ನು ಕೇಳಿಸಿಕೊಂಡಿದ್ದೇನೆ, ಆದರೆ ಅವರಾಗಲೀ ಅವರು ಪಕ್ಷದ ಸದಸ್ಯರಾಗಲೀ ದೂರು ಸಲ್ಲಿಸಿಲ್ಲ ಎಂದು ಹೇಳಿದರು. ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ಯಾವುದೇ ಪೊಲೀಸ್ ಸ್ಟೇಷನ್ ನಲ್ಲಿ ದೂರು ದಾಖಲಾಗಿರುವುದು ತನ್ನ ಗಮನಕ್ಕೆ ಬಂದಿಲ್ಲ, ಅಶೋಕ ಅವರು ನಿರ್ದಿಷ್ಟವಾಗಿ ದೂರು ಸಲ್ಲಿಸಿದರೆ ತನಿಖೆ ಮಾಡಿಸಬಹುದು ಎಂದು ಪರಮೇಶ್ವರ್ ಹೇಳಿದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಸಿಎಂ ಆರೋಗ್ಯ ವಿಚಾರಿಸಲು ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿದ್ದರಂತೆ: ಜಿ ಪರಮೇಶ್ವರ್, ಗೃಹ ಸಚಿವ