ಬೆಳಗಾವಿ ಬಿಮ್ಸ್​ನಲ್ಲಿ ನವಜಾತ ಶಿಶುಗಳ ಮರಣ; ಸರ್ಕಾರವನ್ನು ಬೆಂಡೆತ್ತಿದ್ದ ವಿಪಕ್ಷ ನಾಯಕ ಆರ್ ಅಶೋಕ

ಬೆಳಗಾವಿ ಬಿಮ್ಸ್​ನಲ್ಲಿ ನವಜಾತ ಶಿಶುಗಳ ಮರಣ; ಸರ್ಕಾರವನ್ನು ಬೆಂಡೆತ್ತಿದ್ದ ವಿಪಕ್ಷ ನಾಯಕ ಆರ್ ಅಶೋಕ

ಅರುಣ್​ ಕುಮಾರ್​ ಬೆಳ್ಳಿ
|

Updated on: Dec 09, 2024 | 10:29 AM

ಹೆರಿಗೆಗೆ ಅಂತ ಸರ್ಕಾರೀ ಆಸ್ಪತ್ರೆಗಳಿಗೆ ಹೋಗಲು ಮಹಿಳೆಯರು ಭಯಪಡುತ್ತಿರುವ ವಾತಾವರಣ ರಾಜ್ಯದಲ್ಲಿ ನಿರ್ಮಾಣವಾಗಿದೆ ಅದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾವೇಶಗಳನ್ನು ಮಾಡಿಕೊಂಡು ತಿರುಗಾಡುತ್ತಿದ್ದಾರೆ, ಬಳ್ಳಾರಿ ಸಮಾವೇಶದಲ್ಲಿ ಅವರು ಪಾಲ್ಗೊಂಡರು, ಅದರೆ ಬಾಣಂತಿಯರು ಸಾಯತ್ತಿರುವ ಜಿಲ್ಲಾಸ್ಪತ್ರೆಗೆ ಭೇಟಿ ನೀಡಲು ಅವರಲ್ಲಿ ಸಮಯವಿರಲಿಲ್ಲ ಎಂದು ಅಶೋಕ ಹೇಳಿದರು.

ಬೆಳಗಾವಿ: ನಗರದ ಸುವರ್ಣ ಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಶುರುವಾಗಲಿದೆ ಮತ್ತು ಸರ್ಕಾರವನ್ನು ಕಟಕಟೆಯಲ್ಲಿ ನಿಲ್ಲಿಸಲು ವಿರೋಧ ಪಕ್ಷದ ನಾಯಕರು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ನಮ್ಮ ವರದಿಗಾರನೊಂದಿಗೆ ಮಾತಾಡಿದ ವಿರೋಧ ಪಕ್ಷದ ನಾಯಕ ಅರ್ ಅಶೋಕ ಬೆಳಗಾವಿಯ ಬಿಮ್ಸ್ ನಲ್ಲಿ ನವಜಾತ ಶಿಶುಗಳು ಮತ್ತು ಬಾಣಂತಿಯರ ಸಾವಿನ ಬಗ್ಗೆ ಆತಂಕ ವ್ಯಕ್ತಪಡಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಸರ್ಕಾರೀ ಆಸ್ಪತ್ರೆಗಳಿಗೆ ಕಳಪೆ ಗುಣಮಟ್ಟದ ಔಷಧಿ ಪೂರೈಕೆಯಾಗುತ್ತಿದ್ದರೂ ಸಿದ್ದರಾಮಯ್ಯ ಸರ್ಕಾರ ನಿದ್ರಿಸುತ್ತಿದೆ, ಒಂದೇ ಒಂದು ವ್ಯವಸ್ಥೆ ಆಸ್ಪತ್ರೆಗಳಲ್ಲಿ ಸರಿ ಇಲ್ಲ, ಶೌಚಾಲಯಗಳು ಗಬ್ಬೆದ್ದು ಹೋಗಿವೆ, ಕುಡಿಯುವ ನೀರಿಲ್ಲ, ಊಟದ ವ್ಯವಸ್ಥೆ ಹದಗೆಟ್ಟು ಹೋಗಿದೆ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿನಾಳೆಯಿಂದ ಬೆಳಗಾವಿ ಚಳಿಗಾಲ ಅಧಿವೇಶನ: ವಿಪಕ್ಷ ಬಿಜೆಪಿಗೆ ಮಗ್ಗಲು ಮುಳ್ಳಾದ ಯತ್ನಾಳ್..ಅಶೋಕ್ ಹೊಸ ಪ್ಲ್ಯಾನ್