Bengaluru; ವಿಧಾನ ಸಭಾ ಅಧಿವೇಶನ ಶುರುವಾದಾಗ ವಿರೋಧ ಪಕ್ಷದ ನಾಯಕನ ಅಗತ್ಯವಿರುತ್ತದೆ: ಬಿಎಸ್ ಯಡಿಯೂರಪ್ಪ

ಅರುಣ್​ ಕುಮಾರ್​ ಬೆಳ್ಳಿ

Updated on: Jun 23, 2023 | 5:38 PM

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ ಪುನಃ ಬಲಗೊಂಡು ಆಡಳಿತ ನಡೆಸಲಿದೆ ಎಂದು ಯಡಿಯೂರಪ್ಪ ಹೇಳಿದರು.

ತುಮಕೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಇಂದು ತುಮಕೂರು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ, ರಾಜ್ಯದಲ್ಲಿ ಬಿಜೆಪಿ ಪುನಃ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು. ವಿಶ್ವದ ಅತ್ಯಂತ ಪ್ರಭಾವಶಾಲಿ ಮತ್ತು ಜನಪ್ರಿಯ ನಾಯಕರೆನಿಸಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರ ನೇತೃತ್ವದಲ್ಲಿ ಬಿಜೆಪಿ ರಾಜ್ಯದಲ್ಲಿ ಪುನಃ ಬಲಗೊಂಡು ಆಡಳಿತ ನಡೆಸಲಿದೆ ಎಂದು ಅವರು ಹೇಳಿದರು. ವಿರೋಧ ಪಕ್ಷದ ನಾಯಕನ (Leader Of Opposition) ಆಯ್ಕೆ ವಿಳಂಬವಾಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಅಸಹನೆಯಿಂದ ಉತ್ತರಿಸಿದ ಯಡಿಯೂರಪ್ಪ ವಿಧಾನ ಸಭೆ ಅಧಿವೇಶನ ಶುರುವಾದಾಗ ವಿರೋಧ ಪಕ್ಷದ ನಾಯಕನ ಅಗತ್ಯ ಬೀಳುತ್ತದೆ, ಅದಕ್ಕಿಂತ ಮೊದಲು ಪಕ್ಷದ ವರಿಷ್ಠರು ನಾಯಕನನ್ನು ಆಯ್ಕೆ ಮಾಡಲಿದ್ದಾರೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.