PM Modi in Bengaluru: ಪ್ರಧಾನಿ ಮೋದಿಗೆ 13ಕೆಜಿ ತೂಕದ ಬೆಳ್ಳಿ ಪ್ರತಿಮೆ ನೀಡಿ ಸನ್ಮಾನಿಸಿದ ಬಿಜೆಪಿ ನಾಯಕರು

Updated on: May 10, 2026 | 11:34 AM

ಮೂರು ರಾಜ್ಯಗಳ ಚುನಾವಣಾ ಗೆಲುವಿನ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ. ಬೆಂಗಳೂರಿನ HAL ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ನಾಯಕರು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ, ಪ್ರಧಾನಿಗಳಿಗೆ 13 ಕೆಜಿ ತೂಕದ ಬೆಳ್ಳಿ ವಿಗ್ರಹ ನೀಡಿ ಅದ್ಧೂರಿ ಸನ್ಮಾನ ಮಾಡಿದರು. ಹಲವು ಕೇಂದ್ರ ಮತ್ತು ರಾಜ್ಯ ನಾಯಕರು ಉಪಸ್ಥಿತರಿದ್ದು, ಬಿಜೆಪಿ ಗೆಲುವನ್ನು ಸಂಭ್ರಮಿಸಿದರು.

ಬೆಂಗಳೂರು, ಮೇ 10: ಮೂರು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಜಯಭೇಟಿ ಭಾರಿಸಿದ ಬೆನ್ನಲ್ಲೆ ಪ್ರಧಾನಿ ನರೇಂದ್ರ ಮೋದಿಯವರು ಇಂದು (ಮೇ 10) ಕರ್ನಾಟಕಕ್ಕೆ ನೀಡಿದ್ದಾರೆ. ಬೆಂಗಳೂರಿನ ಎಚ್‌ಎಎಲ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯ ಬಿಜೆಪಿ ನಾಯಕರಿಂದ ಅದ್ಧೂರಿ ಸನ್ಮಾನ ನೆರವೇರಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರಧಾನಿಯವರಿಗೆ 13 ಕೆಜಿ ತೂಕದ ಬೆಳ್ಳಿಯ ಪ್ರತಿಮೆಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಶಾಸಕರಾದ ಅಶ್ವತ್ಥ್ ನಾರಾಯಣ್, ಎಸ್.ಆರ್. ವಿಶ್ವನಾಥ್ ಸೇರಿದಂತೆ ಪ್ರಮುಖ ನಾಯಕರು ಉಪಸ್ಥಿತರಿದ್ದು, ಚುನಾವಣಾ ಯಶಸ್ಸನ್ನು ಸಂಭ್ರಮಿಸಿದರು.

ಇದನ್ನೂ ಓದಿ: ಬೆಂಗಳೂರಿನ ಹೆಚ್​ಎಎಲ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ, ನೇರ ಪ್ರಸಾರ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published on: May 10, 2026 11:32 AM
Follow Us
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More