AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ ಅಭ್ಯರ್ಥಿ ಆಯ್ಕೆಯನ್ನು ಎರಡೂ ಪಕ್ಷದ ನಾಯಕರು ಮಾಡಲಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ ಅಭ್ಯರ್ಥಿ ಆಯ್ಕೆಯನ್ನು ಎರಡೂ ಪಕ್ಷದ ನಾಯಕರು ಮಾಡಲಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Oct 19, 2024 | 1:42 PM

Share

ಸದ್ಯಕ್ಕೆ ಜೆಡಿಎಸ್ ಕಾರ್ಯಕರ್ತರೊಂದಿಗೆ ಸಭೆ ನಡೆಸಲು ಹುಬ್ಬಳ್ಳಿಗೆ ಬಂದಿದ್ದೇನೆಂದ ನಿಖಿಲ್ ಮುಂದಿನ ಸಭೆಗಳೇನಿದ್ದರೂ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಜೊತೆ ನಡೆಸುವುದಾಗಿ ಹೇಳಿದರು. ಇವತ್ತು ಸಾಯಂಕಾಲ ಚನ್ನಪಟ್ಟಣ ಕ್ಷೇತ್ರದ ಎನ್​ಡಿಎ ಅಭ್ಯರ್ಥಿ ಹೆಸರು ಘೋಷಣೆಯಾಗುವ ನಿರೀಕ್ಷೆ ಇದೆ.

ಹುಬ್ಬಳ್ಳಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಎನ್ ಡಿಎ ಅಭ್ಯರ್ಥಿ ತಾನೋ ಅಥವಾ ಸಿಪಿ ಯೋಗೇಶ್ವರ್ ಅವರೋ ಅನ್ನೋದನ್ನು ಎರಡೂ ಪಕ್ಷಗಳ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಜೆಡಿಎಸ್ ಪಕ್ಷದ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಹೇಳಿದರು. ಒಬ್ಬ ಕಾರ್ಯಕರ್ತನಾಗಿ ಪಕ್ಷವನ್ನು ಸಂಘಟಿಸುವ ಜವಾಬ್ದಾರಿಯನ್ನು ತನಗೆ ನೀಡಲಾಗಿದೆ, ಅದನ್ನು ನಿಷ್ಠೆಯಿಂದ ಮಾಡುತ್ತಿರುವುದಾಗಿ ನಿಖಿಲ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಚನ್ನಪಟ್ಟಣಕ್ಕೆ ಎನ್​ಡಿಎ ಅಭ್ಯರ್ಥಿ ಯಾರು ಅಂತ ನಾಳೆ ಗೊತ್ತಾಗಲಿದೆ: ನಿಖಿಲ್ ಕುಮಾರಸ್ವಾಮಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.