ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಕೈ ಕಮಾಂಡ್ ಅಹಿಂದ

Edited By:

Updated on: May 27, 2026 | 3:42 PM

ಸಿದ್ದರಾಮಯ್ಯ ಅವರು ನಾಳೆ (ಮೇ 28) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಕರ್ನಾಟಕದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಇನ್ನೂ ಎರಡು ಸಿದ್ದರಾಮಯ್ಯನವರ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದ್ದು, ಇನ್ನೂ ಎರಡು ವರ್ಷ ಆಡಳಿತ ಬಾಕಿ ಇರುವಾಗಲೇ ನಾಯಕತ್ವ ಬದಲಾವಣೆ ಮಾಡುತ್ತಿರುವ ಕಾಂಗ್ರೆಸ್ ಹೈಕಮಾಂಡ್ ನಡೆಗೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ. ಇನ್ನೊಂದೆಡೆ ರಾಜ್ಯ ಶೋಷಿತ ವರ್ಗಗಳ ಒಕ್ಕೂಟ ಸಹ ಸಿಡಿದೆದ್ದಿದ್ದು, ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಕೊಡಿಸಿದ್ರೆ ಹೋರಾಟ ಮಾಡುವುದಾಗಿ ಹೈಕಮಾಂಡ್​ಗೆ ಎಚ್ಚರಿಕೆ ನೀಡಿದೆ.

ಬೆಂಗಳೂರು, (ಮೇ 27) : ಸಿದ್ದರಾಮಯ್ಯ ಅವರು ನಾಳೆ (ಮೇ 28) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಕರ್ನಾಟಕದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಇನ್ನೂ ಎರಡು ಸಿದ್ದರಾಮಯ್ಯನವರ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದ್ದು, ಇನ್ನೂ ಎರಡು ವರ್ಷ ಆಡಳಿತ ಬಾಕಿ ಇರುವಾಗಲೇ ನಾಯಕತ್ವ ಬದಲಾವಣೆ ಮಾಡುತ್ತಿರುವ ಕಾಂಗ್ರೆಸ್ ಹೈಕಮಾಂಡ್ ನಡೆಗೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ. ಇನ್ನೊಂದೆಡೆ ರಾಜ್ಯ ಶೋಷಿತ ವರ್ಗಗಳ ಒಕ್ಕೂಟ ಸಹ ಸಿಡಿದೆದ್ದಿದ್ದು, ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಕೊಡಿಸಿದ್ರೆ ಹೋರಾಟ ಮಾಡುವುದಾಗಿ ಹೈಕಮಾಂಡ್​ಗೆ ಎಚ್ಚರಿಕೆ ನೀಡಿದೆ.

ಈ ಬಗ್ಗೆ ಬೆಂಗಳೂರಿನಲ್ಲಿಂದ ರಾಜ್ಯ ಶೋಷಿತ ವರ್ಗಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ ಮಾತನಾಡಿ, ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ರಾಜೀನಾಮೆ ಕೇಳಿದ್ದಾರಂತೆ. ಇದು ನಿಜವಾಗಿದ್ರೆ ಯಾವ ರೀತಿ ಎದುರಿಸ್ತಾರೆ ಅನ್ನೋದನ್ನ ತೋರಿಸುತ್ತೆ. ನಮ್ಮ ಸಮಾಜ ಸುಮ್ಮನೆ ಕೂರುವುದಿಲ್ಲ, ನಾಳೆಯಿಂದಲೇ ಹೋರಾಟ ಮಾಡುತ್ತೇವೆ ಎಂದು ನೇರವಾಗಿ ಕಾಂಗ್ರೆಸ್ ಹೈಕಮಾಂಡ್ಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ರಾಜೀನಾಮೆ ಸುದ್ದಿ ಬೆನ್ನಲ್ಲೇ ತಮ್ಮ ಮಹತ್ವಕಾಂಕ್ಷಿ ಯೋಜನೆ ನೆನೆದ ಸಿದ್ದರಾಮಯ್ಯ, ಇದು ವಿದಾಯದ ಸುಳಿವೇ?

ಸಿಎಂ ಸಿದ್ದರಾಮಯ್ಯನವರು ಸಂದಿಗ್ಧ ಪರಿಸ್ಥಿತಿಯಲ್ಲಿಲ್ಲ.ರಾಹುಲ್ ಗಾಂಧಿ ಹೇಳಿದ್ರೆ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ರು. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ರೆ ಮುಂದೇನು? ಅಹಿಂದ ವರ್ಗ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದೇವೆ. ಯಾವುದೇ ಬದಲಾವಣೆ ಮಾಡಬಾರದ. ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ವರ್ಚಸ್ಸು ಕಡೆಗಣಿಸಬಾರದು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರೋದು ಅಹಿಂದ ವರ್ಗದಿಂದ. ಅಹಿಂದ ವರ್ಗದ ಯಾರನ್ನಾದ್ರೂ ಸಿಎಂ ಮಾಡಲಿ.ಕಾಂಗ್ರೆಸ್​ನವರು ಸಮಸಮಾಜ ನಿರ್ಮಿಸ್ತೇವೆ ಅಂತಾರೆ, ಎಲ್ಲಿ ಮಾಡ್ತಿದ್ದಾರೆ. ನಮ್ಮ ಸಮುದಾಯದ ಶಾಸಕರು ಸಿಎಂ ಸಿದ್ದರಾಮಯ್ಯ ಜೊತೆ ನಿಲ್ಲಬೇಕು ಎಂದು ಕರೆ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 27, 2026 03:42 PM
Loading...
Unable to load recommendations.
Follow Us
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More