ಕಾಂಗ್ರೆಸ್ನಲ್ಲಿ ಸಿಎಂ ಉತ್ತರಾಧಿಕಾರಿ ಸಮರ; ನನ್ನ ಹೇಳಿಕೆಗೆ ಬದ್ಧ ಎಂದ ಯತೀಂದ್ರ
ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಉತ್ತರಾಧಿಕಾರಿ ಯಾರೆಂಬುದರ ಬಗ್ಗೆ ಪ್ರಶ್ನೆಗಳು ಎದ್ದಿವೆ. ಸಿದ್ದರಾಮಯ್ಯನವರ ನಂತರ ಸಚಿವ ಸತೀಶ್ ಜಾರಕಿಹೊಳಿ ಉತ್ತರಾಧಿಕಾರಿ ಎಂಬ ಅರ್ಥದಲ್ಲಿ ತಾವು ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಂಡ ಯತೀಂದ್ರ, ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ ಎಂದಿದ್ದಾರೆ. ನನ್ನ ಹೇಳಿಕೆಯಲ್ಲಿ ತಪ್ಪೇನಿಲ್ಲ. ನನ್ನ ಹೇಳಿಕೆಯನ್ನು ಬೇರೆ ಬೇರೆ ರೀತಿ ಬಿಂಬಿಸುತ್ತಿದ್ದಾರೆ ಎಂದು ಯತೀಂದ್ರ ಹೇಳಿದ್ದಾರೆ.
ಮೈಸೂರು, ಅಕ್ಟೋಬರ್ 25: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ (Siddaramaiah) ನಂತರ ಉತ್ತರಾಧಿಕಾರಿ ಯಾರಾಗಲಿದ್ದಾರೆ ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಸಿಎಂ ಹುದ್ದೆಗೆ ಸತೀಶ್ ಜಾರಕಿಹೊಳಿ ಅವರಿಗೆ ಅರ್ಹತೆ ಇದೆ ಎಂದಿದ್ದ ಸಿಎಂ ಸಿದ್ದರಾಮಯ್ಯನವರ ಮಗ ಯತೀಂದ್ರ (Yatindra) ಮತ್ತೆ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನನ್ನ ಹೇಳಿಕೆಗೆ ನಾನೂ ಈಗಲೂ ಬದ್ಧ, ಆದರೆ ಸಿದ್ದರಾಮಯ್ಯನವರು 5 ವರ್ಷ ಸಿಎಂ ಆಗಿರಲಿದ್ದಾರೆ ಎಂದು ಯತೀಂದ್ರ ಹೇಳಿಕೆ ನೀಡಿದ್ದಾರೆ. ನನ್ನ ತಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ 5 ವರ್ಷಗಳ ಅವಧಿಯನ್ನು ಪೂರ್ಣಗೊಳಿಸಲಿದ್ದಾರೆ ಎಂದು ಕಾಂಗ್ರೆಸ್ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಇಂದು ಹೇಳಿದ್ದಾರೆ.
ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ, ‘ನವೆಂಬರ್ ಕ್ರಾಂತಿ’ ಕೇವಲ ಊಹಾಪೋಹ. ನಮ್ಮ ಪಕ್ಷದಲ್ಲಿ ಅಂತಹ ಯಾವುದೇ ಚರ್ಚೆ ಇಲ್ಲ ಎಂದಿದ್ದಾರೆ.
ಇದೇ ವೇಳೆ ಸಿದ್ದರಾಮಯ್ಯನವರ ನಂತರ ಸಚಿವ ಸತೀಶ್ ಜಾರಕಿಹೊಳಿ ಉತ್ತರಾಧಿಕಾರಿ ಎಂಬ ಅರ್ಥದಲ್ಲಿ ತಾವು ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಂಡ ಯತೀಂದ್ರ, ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ ಎಂದಿದ್ದಾರೆ. ನನ್ನ ಹೇಳಿಕೆಯಲ್ಲಿ ತಪ್ಪೇನಿಲ್ಲ. ನನ್ನ ಹೇಳಿಕೆಯನ್ನು ಬೇರೆ ಬೇರೆ ರೀತಿ ಬಿಂಬಿಸುತ್ತಿದ್ದಾರೆ ಎಂದು ಯತೀಂದ್ರ ಹೇಳಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
