ಬೆಳಗಾವಿಯಲ್ಲಿ ಪೈಶಾಚಿಕ ಕೃತ್ಯ: ವಿದ್ಯಾರ್ಥಿನಿ ಮೇಲೆ 2 ವರ್ಷಗಳಿಂದ ಅತ್ಯಾಚಾರ,ಉಪನ್ಯಾಸಕ ಅರೆಸ್ಟ್
ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. ಉಪನ್ಯಾಸಕನೋರ್ವ ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿನಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಬೆಳಗಾವಿ ತಾಲೂಕಿನ ಬಸವನ ಕುಡಚಿ ನಿವಾಸಿ, ಖಾಸಗಿ ಕಾಲೇಜಿನ ಉಪನ್ಯಾಸಕ ನಾಗೇಶ್ವರ ವಿರುದ್ಧ ಆರೋಪ ಕೇಳಿಬಂದಿದ್ದು, ಈ ಸಂಬಂಧ ಕ್ಯಾಂಪ್ ಠಾಣೆ ಪೊಲೀಸರು ಪೋಕ್ಸೋ ಕಾಯ್ದೆ ಉಪನ್ಯಾಸಯ ನಾಗೇಶ್ವರನನ್ನು ಬಂಧಿಸಿದ್ದಾರೆ.
ಬೆಳಗಾವಿ, (ನವೆಂಬರ್ 30): ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. ಉಪನ್ಯಾಸಕನೋರ್ವ ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿನಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಬೆಳಗಾವಿಯ ಖಾಸಗಿ ಕಾಲೇಜಿನ ಉಪನ್ಯಾಸಕ ನಾಗೇಶ್ವರ ವಿರುದ್ಧ ಆರೋಪ ಕೇಳಿಬಂದಿದ್ದು, ಈ ಸಂಬಂಧ ಕ್ಯಾಂಪ್ ಠಾಣೆ ಪೊಲೀಸರು ಪೋಕ್ಸೋ ಕಾಯ್ದೆ ಉಪನ್ಯಾಸಯ ನಾಗೇಶ್ವರನನ್ನು ಬಂಧಿಸಿದ್ದಾರೆ.
ಬೆಳಗಾವಿ ಖಾಸಗಿ ಕಾಲೇಜಿನ ಉಪನ್ಯಾಸಕ ನಾಗೇಶ್ವರ್ ವಿದ್ಯಾರ್ಥಿಯ ಮೇಲೆ ಎರಡು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಲಿವ್ ಇನ್ ರಿಲೇಶನ್ ಶಿಪ್ ಇಟ್ಟುಕೊಳ್ಳಬೇಕು, ಕರೆದ ಕಡೆ ಬರಬೇಕು, ಇಬ್ಬರ ಮಧ್ಯ ಇರುವ ಸಂಬಂಧ ಯಾರ ಬಳಿಯೂ ಹೇಳಬಾರದು . ವಿಷಯ ಬಹಿರಂಗಪಡಿಸಿದರೆ ಕೊಲೆ ಮಾಡುವುದಾಗಿ ಉಪನ್ಯಾಸಕ ಬೆದರಿಕೆ ಹಾಕಿದ್ದಾನೆ.
ಅರ್ಥಶಾಸ್ತ್ರ, ಲೆಕ್ಕಶಾಸ್ತ್ರ, ವಿಭಾಗದ ಅಥಿತಿ ಉಪನ್ಯಾಸಕನಾಗಿದ್ದ ನಾಗೇಶ್ ಯುವತಿಯ ಮೇಲೆ ಅತ್ಯಾಚಾರ ಎಸೆಗಲೆಂದೇ ಗಣೇಶಪುರದಲ್ಲಿ ಬಾಡಿಗೆ ಮನೆ ಮಾಡಿದ್ದಾನೆ. ಬಾಡಿಗೆ ಮನೆಯಲ್ಲಿ ನಿರಂತರವಾಗಿ ಎರಡು ವರ್ಷಗಳಿಂದ ಅತ್ಯಾಚಾರ ಎಸಿಗುತ್ತಿದ್ದಾನೆ. ಪೋಷಕರ ಬಳಿ ಅತ್ಯಾಚಾರ ಎಸಗುತ್ತಿರುವ ಸಂಗತಿಯನ್ನು ಸಂತ್ರಸ್ತ ಯುವತಿ ಹೇಳಿಕೊಂಡಿದ್ದಾಳೆ.
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
