ಲೀಲಾವತಿ ಅಂತಿಮ ದರ್ಶನ ಪಡೆದು ವಿನೋದ್​ ರಾಜ್​ನ ಸಂತೈಸಿದ ಉಪೇಂದ್ರ

Updated on: Dec 09, 2023 | 10:38 AM

ನಿರ್ದೇಶಕ ಉಪೇಂದ್ರ ಅವರು ಇಂದು (ಡಿಸೆಂಬರ್ 9) ಬೆಳಿಗ್ಗೆ ಲೀಲಾವತಿ ಅಂತಿಮ ದರ್ಶನ ಪಡೆದರು. ಈ ವೇಳೆ ಅವರು ಲೀಲಾವತಿ ಪುತ್ರ ವಿನೋದ್ ರಾಜ್​ ಅವರನ್ನು ತಬ್ಬಿ ಸಂತೈಸಿದರು.

ಹಿರಿಯ ನಟಿ ಲೀಲಾವತಿ ಅವರು ನಮ್ಮನ್ನು ಅಗಲಿದ್ದಾರೆ. ಸದ್ಯ ಸೋಲದೇವನಹಳ್ಳಿಯಲ್ಲಿರುವ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕನ್ನಡ ಚಿತ್ರರಂಗದ ಅನೇಕರು ಆಗಮಿಸಿ ಲೀಲಾವತಿ ಅವರ ಅಂತಿಮ ದರ್ಶನ ಪಡೆದಿದ್ದಾರೆ. ನಟ, ನಿರ್ದೇಶಕ ಉಪೇಂದ್ರ ಅವರು ಇಂದು (ಡಿಸೆಂಬರ್ 9) ಬೆಳಿಗ್ಗೆ ಲೀಲಾವತಿ ಅಂತಿಮ ದರ್ಶನ ಪಡೆದರು. ಈ ವೇಳೆ ಅವರು ಲೀಲಾವತಿ (leelavathi) ಪುತ್ರ ವಿನೋದ್ ರಾಜ್​ ಅವರನ್ನು ತಬ್ಬಿ ಸಂತೈಸಿದರು. ಈ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯ ಆಗಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Dec 09, 2023 10:35 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More