‘ನನಗೆ ಯುವರಾಜ್ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಬಗ್ಗೆ ವಿನೋದ್ ರಾಜ್ ಪುತ್ರನ ಮನದ ಮಾತು
ಮೊಮ್ಮಗ ಯುವರಾಜ್ ಬಗ್ಗೆ ಲೀಲಾವತಿ ಅವರು ಅಪಾರ ಪ್ರೀತಿ, ಕಾಳಜಿ ಇಟ್ಟುಕೊಂಡಿದ್ದರು. ಅಜ್ಜಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಯುವರಾಜ್ ಅವರು ಹಳೇ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ವಿನೋದ್ ರಾಜ್ ಪುತ್ರನ ಮಾತುಗಳು ಇಲ್ಲಿವೆ..
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ (Leelavathi) ಅವರ ನಿಧನದಿಂದ ಆಪ್ತರಿಗೆ ತೀವ್ರ ನೋವು ಆಗಿದೆ. ಅವರ ಮೊಮ್ಮಗ ಯುವರಾಜ್ (Leelavathi Grandson Yuvaraj) ಕೂಡ ಚೆನ್ನೈನಿಂದ ಬಂದು ಅಜ್ಜಿಯ ಅಂತ್ಯ ಸಂಸ್ಕಾರದಲ್ಲಿ ಭಾಗಿ ಆಗಿದ್ದಾರೆ. ಈ ವೇಳೆ ‘ಟಿವಿ9 ಕನ್ನಡ’ ಜೊತೆ ಅವರು ಮಾತನಾಡಿದ್ದಾರೆ. ವಿನೋದ್ ರಾಜ್ (Vinod Raj) ಅವರು ಮದುವೆ ಆಗಿರುವ ವಿಷಯವನ್ನು ಸಾಕಷ್ಟು ವರ್ಷಗಳ ಕಾಲ ಗೌಪ್ಯವಾಗಿ ಇಡಲಾಗಿತ್ತು. ಕೆಲವೇ ತಿಂಗಳ ಹಿಂದೆ ಆ ಬಗ್ಗೆ ಮಾಹಿತಿ ಹೊರಬಿತ್ತು. ಮೊಮ್ಮಗನಿಗೆ ಯುವರಾಜ್ ಎಂದು ಲೀಲಾವತಿ ಅವರೇ ನಾಮಕರಣ ಮಾಡಿದ್ದರು. ಆ ಎಲ್ಲ ವಿಷಯಗಳನ್ನು ಯುವರಾಜ್ ಮೆಲುಕು ಹಾಕಿದ್ದಾರೆ. ‘ಅಂದು ನಾನು ಬಂದು ಅಜ್ಜಿ ಎಂದು ಕರೆದಾಗ ಕಣ್ಣು ಬಿಟ್ಟಿದ್ದರು. ಯುವರಾಜಾ ಅಂತ ನನ್ನನ್ನು ಕರೆದಿದ್ದರು. ಅದು ನನಗೆ ತುಂಬ ಫೀಲ್ ಆಗುತ್ತಿದೆ’ ಎಂದು ಅವರು ಹೇಳಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
