‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಬಗ್ಗೆ ವಿನೋದ್​ ರಾಜ್​ ಪುತ್ರನ ಮನದ ಮಾತು

Edited By:

Updated on: Dec 10, 2023 | 12:15 PM

ಮೊಮ್ಮಗ ಯುವರಾಜ್​ ಬಗ್ಗೆ ಲೀಲಾವತಿ ಅವರು ಅಪಾರ ಪ್ರೀತಿ, ಕಾಳಜಿ ಇಟ್ಟುಕೊಂಡಿದ್ದರು. ಅಜ್ಜಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಯುವರಾಜ್​ ಅವರು ಹಳೇ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ವಿನೋದ್​ ರಾಜ್​ ಪುತ್ರನ ಮಾತುಗಳು ಇಲ್ಲಿವೆ..

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ (Leelavathi) ಅವರ ನಿಧನದಿಂದ ಆಪ್ತರಿಗೆ ತೀವ್ರ ನೋವು ಆಗಿದೆ. ಅವರ ಮೊಮ್ಮಗ ಯುವರಾಜ್​ (Leelavathi Grandson Yuvaraj) ಕೂಡ ಚೆನ್ನೈನಿಂದ ಬಂದು ಅಜ್ಜಿಯ ಅಂತ್ಯ ಸಂಸ್ಕಾರದಲ್ಲಿ ಭಾಗಿ ಆಗಿದ್ದಾರೆ. ಈ ವೇಳೆ ‘ಟಿವಿ9 ಕನ್ನಡ’ ಜೊತೆ ಅವರು ಮಾತನಾಡಿದ್ದಾರೆ. ವಿನೋದ್​ ರಾಜ್​ (Vinod Raj) ಅವರು ಮದುವೆ ಆಗಿರುವ ವಿಷಯವನ್ನು ಸಾಕಷ್ಟು ವರ್ಷಗಳ ಕಾಲ ಗೌಪ್ಯವಾಗಿ ಇಡಲಾಗಿತ್ತು. ಕೆಲವೇ ತಿಂಗಳ ಹಿಂದೆ ಆ ಬಗ್ಗೆ ಮಾಹಿತಿ ಹೊರಬಿತ್ತು. ಮೊಮ್ಮಗನಿಗೆ ಯುವರಾಜ್​ ಎಂದು ಲೀಲಾವತಿ ಅವರೇ ನಾಮಕರಣ ಮಾಡಿದ್ದರು. ಆ ಎಲ್ಲ ವಿಷಯಗಳನ್ನು ಯುವರಾಜ್​ ಮೆಲುಕು ಹಾಕಿದ್ದಾರೆ. ‘ಅಂದು ನಾನು ಬಂದು ಅಜ್ಜಿ ಎಂದು ಕರೆದಾಗ ಕಣ್ಣು ಬಿಟ್ಟಿದ್ದರು. ಯುವರಾಜಾ ಅಂತ ನನ್ನನ್ನು ಕರೆದಿದ್ದರು. ಅದು ನನಗೆ ತುಂಬ ಫೀಲ್​ ಆಗುತ್ತಿದೆ’ ಎಂದು ಅವರು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More