ಲೀಲಾವತಿಯವರ ಅಂತಿಮ ದರ್ಶನಕ್ಕೆ ಹೇಗಿದೆ ವ್ಯವಸ್ಥೆ: ಜಿಲ್ಲಾಧಿಕಾರಿ ನೀಡಿದ ಮಾಹಿತಿ

| Updated By: ರಾಜೇಶ್ ದುಗ್ಗುಮನೆ

Updated on: Dec 09, 2023 | 6:33 AM

Leelavathi: ಹಿರಿಯ ನಟಿ ಲೀಲಾವತಿಯವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹಿರಿಯ ನಟಿ ಲೀಲಾವತಿಯವರ (Leelavathi) ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ನೆಲಮಂಗಲದ ಅಂಬೇಡ್ಕರ್ ಗ್ರೌಂಡ್​ನಲ್ಲಿ ನಡೆಯಲಿದೆ. ಹಿರಿಯ ನಟಿಯ ಅಂತಿಮ ದರ್ಶನ ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಲಿದ್ದಾರೆ ಜೊತೆಗೆ ಚಿತ್ರರಂಗದ ಹಾಗೂ ರಾಜಕೀಯ ರಂಗದ ಗಣ್ಯರು ಸಹ ಆಗಮಿಸಲಿದ್ದಾರೆ. ಅಂತಿಮ ದರ್ಶನಕ್ಕೆ ಸೂಕ್ತ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದೆ. ಅಂಬೇಡ್ಕರ್ ಮೈದಾನದಲ್ಲಿ ವ್ಯವಸ್ಥೆಯನ್ನು ಹೇಗೆ ಮಾಡಲಾಗಿದೆ ಎಂಬುದನ್ನು ಜಿಲ್ಲಾಧಿಕಾರಿ ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:06 pm, Fri, 8 December 23

Follow us on