ನಕಲಿ ಮತ ತಡೆಯಲು ಪ್ರತಿ ಕ್ಷೇತ್ರದಲ್ಲೂ ಲೀಗಲ್ ಬ್ಯಾಂಕ್ ಆರಂಭ: ರಾಹುಲ್ ಗಾಂಧಿಗೆ ಭರವಸೆ ನೀಡಿದ ಡಿಕೆಶಿ

Updated on: Aug 08, 2025 | 1:37 PM

ಬೆಂಗಳೂರಿನ ಫ್ರೀಡಂ ಪಾರ್ಕ್​ ನಲ್ಲಿ ಆಯೋಜಿಸಲಾಗಿರುವ ‘ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟದಲ್ಲಿ ರಾಹುಲ್ ಗಾಂಧಿ ಭಾಗವಹಿಸಿ ಮತಗಳ್ಳತನ ವಿರುದ್ಧ ವಾಗ್ದಾಳಿ ನಡೆಸಿದರು. ಇನ್ನು ಇದೇ ವೇಳೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಂವಿಧಾನ, ಮತ ಉಳಿಸಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ರಾಹುಲ್ ಗಾಂಧಿಯವರು ಹೇಳಿದಂತೆ ಕರ್ನಾಟಕದ ಪ್ರತಿ ಕ್ಷೇತ್ರದಲ್ಲಿ ಲೀಗಲ್ ಬ್ಯಾಂಕ್ ಆರಂಭಿಸುತ್ತೇವೆ ಎಂದು ಹೇಳಿದರು.

ಬೆಂಗಳೂರು, (ಅಗಸ್ಟ್ 08): ಮತಗಳ್ಳತನ ಆರೋಪ ಮಾಡಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣೆ ಆಯೋಗ ಹಾಗೂ ಬಿಜೆಪಿ ವಿರುದ್ಧ ಸಮರ ಸಾರಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಯೋಜಿಸಲಾಗಿರುವನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟದಲ್ಲಿ ರಾಹುಲ್ ಗಾಂಧಿ ಭಾಗವಹಿಸಿ ಮತಗಳ್ಳತನ ವಿರುದ್ಧ ವಾಗ್ದಾಳಿ ನಡೆಸಿದರು. ಇನ್ನು ಇದೇ ವೇಳೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಂವಿಧಾನ, ಮತ ಉಳಿಸಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ರಾಹುಲ್ ಗಾಂಧಿಯವರು ಹೇಳಿದಂತೆ ಕರ್ನಾಟಕದ ಪ್ರತಿ ಕ್ಷೇತ್ರದಲ್ಲಿ ಲೀಗಲ್ ಬ್ಯಾಂಕ್ ಆರಂಭಿಸುತ್ತೇವೆ ಎಂದು ಹೇಳಿದರು. 

ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಡಿಕೆಶಿ, ಆಸ್ಪತ್ರೆಗಳಲ್ಲಿ ಬ್ಲಡ್ ಬ್ಯಾಂಕ್ ಇರುವಂತೆ ಸಂವಿಧಾನ ಉಳಿಸಿ, ಪ್ರಜಾಪ್ರಭುತ್ವ ರಕ್ಷಣೆ ಮಾಡಲು ಪ್ರತಿ ಕ್ಷೇತ್ರದಲ್ಲಿ ಲೀಗಲ್ ಬ್ಯಾಂಕ್ ಸ್ಥಾಪನೆ ಮಾಡಬೇಕೆಂದು ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ. ಅವರ ಸೂಚನೆ ಮೇರೆಗೆ ನಾವೆಲ್ಲರೂ ಬದ್ಧರಾಗುತ್ತೇವೆ ಎಂದು ತಿಳಿಸಿದರು.